ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಡಳಿತ ವ್ಯವಸ್ಥೆಯನ್ನು ಸುವ್ಯಸ್ಥಿತಗೊಳಿಸಿ : ಮಹೇಶ್ವರ್ ರಾವ್

1 Min Read
1 Min Read

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಡಳಿತ ವ್ಯವಸ್ಥೆಯನ್ನು ಸುವ್ಯಸ್ಥಿತಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಡಳಿತ ವ್ಯವಸ್ಥೆಯನ್ನು ಸುವ್ಯಸ್ಥಿತಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ನಾಗರಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಕೆಲಸ ಮಾಡಬೇಕು. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸ್ಥಳೀಯ ಸಮಸ್ಯೆಗಳನ್ನು ನಿಗದಿತ ಸಮಯದೊಳಗಾಗಿ ಇತ್ಯರ್ಥಪಡಿಸಲು ಸೂಚನೆ ನೀಡಿದರು 

ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವ ಮೂಲಕ ರಸ್ತೆ ಬದಿ ಕಸ ಬಿಸಾಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕ್ರಮವಹಿಸಬೇಕು. ಬಾಕಿಯಿರುವ  ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಸಬೇಕು.

ಮಹೇಶ್ವರ್ ರಾವ್

ತೆರಿಗೆ ಸಂಗ್ರಹಕ್ಕೆ ಕ್ರಮವಹಿಸಿ: 

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ವಿಚಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ತೆರಿಗೆ ಸಂಗ್ರಹವು ಪ್ರಮುಖ ಆದಾಯದ ಮೂಲವಾಗಿದ್ದು, ಆಸ್ತಿ ತೆರಿಗೆ ಗುರಿಯನ್ನು ತಲುಪಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಬೀದಿ ದೀಪ ನಿರ್ವಹಣೆ: 

ನಗರ ವ್ಯಾಪ್ತಿಯ ಬೀದಿ ದೀಪಗಳ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಂಡು, ದುರಸ್ತಿ ಕಾರ್ಯಗಳ ಅಗತ್ಯವಿದ್ದಲ್ಲಿ ದುರಸ್ತಿ ಕಾರ್ಯವನ್ನು ತ್ವರಿತವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಟಿಡಿಆರ್ ಸೆಲ್ ಸ್ಥಾಪನೆ: 

ನಗರ ಪಾಲಿಕೆಗಳಲ್ಲಿ ಟಿಡಿಆರ್ ಸೆಲ್ ಸ್ಥಾಪಿಸಲು ನಿರ್ದೇಶನ ನೀಡಿ, ಮೂಲಕ ಸಾರ್ವಜನಿಕ ಸೌಕರ್ಯಗಳ ಸಮತೋಲಿತ ಹಂಚಿಕೆಯನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. 

ಸಭೆಯಲ್ಲಿ ಪಶ್ಚಿಮ ನಗರ ಪಾಲಿಕೆಯ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ, ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಬೆಂ..ನಿ ನಿಯಮಿತದ ಸಿಇಒ ಕರೀಗೌಡ, ಜಂಟಿ ಆಯುಕ್ತರಾದ ಸಂಗಪ್ಪ ಮತ್ತು ಆರತಿ ಆನಂದ್, ಉಪ ಆಯುಕ್ತರು, ಅಧೀಕ್ಷಕ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. 

Share This Article
Leave a Comment