ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ ಆಯ್ಕೆ ಮಾಡಲಾಗಿದ್ದು, ನಾಲ್ಕೈದು ಬಾರಿ ಸಭೆ ನಡೆಸಿದ ಸದಸ್ಯರು ಅರ್ಹರನ್ನು ಆಯ್ಕೆ ಮಾಡಲು ಸಹಕರಿಸಿದ್ದಕ್ಕೆ ಧನ್ಯವಾದಗಳನ್ನು ಈ ಮೂಲಕ ತಿಳಿಸುತ್ತೇನೆ.
ಪ್ರಶಸ್ತಿ ನೀಡಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮೊದಲೇ ನಿರ್ಧರಿಸಿದಂತೆ ಈ ಬಾರಿ ಯಾವುದೇ ಸಂಘ–ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ. 13 ಮಂದಿ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ ಮಾಡಲಾಗಿದೆ.


