ಎಂಬಿಎ, ಎಂಸಿಎ ಪ್ರವೇಶಕ್ಕೆ ನ.4ರಿಂದ 3ನೇ ಸುತ್ತಿನ ಕೌನ್ಸೆಲಿಂಗ್

1 Min Read
1 Min Read

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು .4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 

3ನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು .4ರಂದು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಆಸಕ್ತರು ₹25,000 ಕಾಷನ್ ಡೆಪಾಸಿಟ್ ಕಟ್ಟಿ  ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

.7ರಂದು ಮಧ್ಯಾಹ್ನ 2ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟ. .8ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು .10ರಿಂದ 12ರವರೆಗೆ ಶುಲ್ಕ ಕಟ್ಟಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು .13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. 

 ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸಿಕ್ಕಿರುವ ಸೀಟು ರದ್ದುಪಡಿಸಿಕೊಳ್ಳಲು .6ರವರೆಗೆ ಅವಕಾಶ ನೀಡಲಾಗಿದೆ. ಸೀಟು ರದ್ದುಪಡಿಸಿಕೊಂಡವರಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ. 

Share This Article
Leave a Comment