ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ @PriyankKharge ಅವರೇ

1 Min Read
1 Min Read

❌ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ

❌ಯಾಕೆ ಪ್ರಯೋಜನವಿಲ್ಲ ಅಂದರೆ 38 ಗ್ರಾಮಗಳಿಗೆ ಬಸ್ಸೇ ಇಲ್ಲ

❌ಬಸ್ಸು ಯಾಕಿಲ್ಲ ಅಂದರೆ ಅಲ್ಲಿ ಯೋಗ್ಯ ರಸ್ತೆಯೇ ಇಲ್ಲ

ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ತಮಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ತಮಗೆ ಕಾಣುತ್ತಿಲ್ಲವೇ ಪ್ರಿಯಾಂಕ್ ಖರ್ಗೆ ಅವರೇ?

ಕಲ್ಯಾಣ ಕರ್ನಾಟಕದ ಜನರ ಮತ ಪಡೆದು, ಅಧಿಕಾರ ಅನುಭವಿಸಿ ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ನಿಮ್ಮ ಏಕೈಕ ಸಾಧನೆ.

RSS ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ನಿಮ್ಮ ಈ ವೈಫಲ್ಯಗಳನ್ನು ಮರೆಮಾಚಬಹುದು, ಜನರನ್ನು ಯಾಮಾರಿಸಬಹುದು ಎಂದು ಕನಸು ಕಾಣಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬ ಮತ್ತು @INCKarnataka ಪಕ್ಷವನ್ನ ನಿಷೇಧ ಮಾಡುವ ದಿನ ಬಹಳ ದೂರವಿಲ್ಲ ಎಂದು ಹೇಳಿದರು

Share This Article
Leave a Comment