ಕಾಂಗ್ರೆಸ್ ಸರ್ಕಾರದ ಉದ್ಧಟತನಕ್ಕೆ ಮತ್ತೋರ್ವ ಮಂಡ್ಯದ ರೈತ ಬಲಿ

1 Min Read
1 Min Read

ತನ್ನ ಸಮಸ್ಯೆ ಪರಿಹಾರಕ್ಕಾಗಿ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸುತ್ತಿ ಸುತ್ತಿ ಬೇಸತ್ತು ನಿನ್ನೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಎಂಬ ಬಡ ರೈತ ಸಾವು ಬದುಕಿನ ಹೋರಾಟದಲ್ಲಿ ಸೋತು ಇಂದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮನಸಿಗೆ ಘಾಸಿ ಉಂಟುಮಾಡಿದೆ.

ಸ್ವಾಮಿ @siddaramaiah ನವರೇ, ಕಾಟಾಚಾರಕ್ಕೆ ಒಂದು ದಿನ ಜನಸ್ಪಂದನ ಕಾರ್ಯಕ್ರಮ ನಡೆಸಿ ಫೋಟೋ ತೆಗೆಸಿಕೊಂಡು ಪುಟ್ಟಗಟ್ಟಲೆ ಜಾಹೀರಾತು ನೀಡಿ ಬಿಟ್ಟಿ ಪ್ರಚಾರಕ್ಕಾಗಿಲ್ಲ ಸ್ವಾಮಿ, ರೈತರು, ಜನಸಾಮಾನ್ಯರಿಗೆ ಪ್ರಯೋಜನವಾಗಿದೆ?

ಪ್ರತಿ ತಿಂಗಳ ಜನಸ್ಪಂದನ ಮಾಡಿ ಜನರ ಅಹವಾಲು ಸ್ವೀಕರಿಸಿ ಎಂದು ತಾವು ಕೊಟ್ಟ ಆದೇಶ ಕೇವಲ ಕಾಗದಕ್ಕೆ ಮಾತ್ರ ಸೀಮಿತವಾಗಿದೆ. ನಿಮ್ಮ ಮಾತಿಗೆ ಸಚಿವರು, ಶಾಸಕರು, ಅಧಿಕಾರಿಗಳು ಯಾರೂ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ. ಬಡವರು, ರೈತರು ಸರ್ಕಾರಿ ಕಚೇರಿಗಳಿಗೆ ಬಂದರೆ ಅವರೊಳಗೆ ಕರೆದು ಅವರ ಆಹ್ವಾನ ಕೇಳುವ, ಅವರ ಅರ್ಜಿ ಸ್ವೀಕರಿಸುವ ಕನಿಷ್ಠ ಸೌಜನ್ಯವೂ ಇಲ್ಲ ಸಂಪೂರ್ಣ ನಿಮ್ಮ ಸಂವೇದನಾರಹಿತ ಸರ್ಕಾರಕ್ಕೆ.

ನಿಮ್ಮ ಈ ದುರಾಡಳಿತಕ್ಕೆ, ಬೇಜವಾಬ್ದಾರಿತನಕ್ಕೆ, ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು ಸ್ವಾಮಿ? ಜನರ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ. ಸಾಕು ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಅವರು ಹೇಳಿದರು

Share This Article
Leave a Comment