ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದಲಿತ ಕುಂದುಕೊರತೆ ಸಭೆ – ಇಲಾಖಾ ಮಟ್ಟದಲ್ಲಿ ತ್ವರಿತ ಕ್ರಮಕ್ಕೆ ಒತ್ತಾಯ!

1 Min Read
1 Min Read

ಕುಣಿಗಲ್, ನ.9:
ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ದಲಿತರ ಕುಂದುಕೊರತೆ ಸಭೆ ನಡೆಯಿತು. ಈ ಸಭೆಯನ್ನು ಸರ್ಕಲ್ ಇನ್ಸ್‌ಪೆಕ್ಟರ್ ಎಂ. ನಾಯಕ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ಸಭೆಯಲ್ಲಿ ಕುಣಿಗಲ್ ತಾಲೂಕಿನ ಹಲವು ದಲಿತ ಮುಖಂಡರು ಮತ್ತು ಸಂಘಟನಾ ಪ್ರತಿನಿಧಿಗಳು ಭಾಗವಹಿಸಿದರು. ಅವರು ಕಂದಾಯ ಇಲಾಖೆಗಳಲ್ಲಿ ದಲಿತರ ಎದುರಿಸುತ್ತಿರುವ ಸಮಸ್ಯೆಗಳು, ಎಸ್‌ಸಿ/ಎಸ್‌ಟಿ ಯೋಜನೆಗಳ ಸಮರ್ಪಕ ಅನುಷ್ಠಾನ, ಹಾಗೂ ಅಟ್ರಾಸಿಟಿ ಪ್ರಕರಣಗಳಲ್ಲಿ ನ್ಯಾಯಯುತ ಕ್ರಮ ಕೈಗೊಳ್ಳುವ ಅಗತ್ಯದ ಬಗ್ಗೆ ಚರ್ಚೆ ನಡೆಸಿದರು.

ಸಭೆಯ ವೇಳೆ, ಪೊಲೀಸ್ ಠಾಣೆಗಳಲ್ಲಿ ದೂರು ಸ್ವೀಕರಿಸುವಲ್ಲಿ ಆಗುವ ವಿಳಂಬದ ಕುರಿತು ವಿಷಯ ಎತ್ತಲ್ಪಟ್ಟಿತು. ಈ ಹಿನ್ನೆಲೆಯಲ್ಲಿ, ಇನ್ಸ್‌ಪೆಕ್ಟರ್ ಎಂ. ನಾಯಕ್ ಅವರು ವಿಜಿಟರ್ ಬುಕ್‌ನಲ್ಲಿ ಅರ್ಜಿದಾರರ ಹೆಸರು, ಊರು ಮತ್ತು ದೂರಿನ ವಿಷಯವನ್ನು ಸ್ಪಷ್ಟವಾಗಿ ದಾಖಲಿಸುವಂತೆ ಸೂಚಿಸಿದರು.

ಅದರ ಜೊತೆಗೆ, ಟ್ರಾಫಿಕ್ ಸಮಸ್ಯೆಗಳು ಹಾಗೂ ದಲಿತರ ಜಮೀನುಗಳಿಗೆ ಸಂಬಂಧಿಸಿದ ವಿವಾದಗಳ ಪರಿಹಾರಕ್ಕೂ ಒತ್ತಾಯಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ವೃತ್ತ ನಿರೀಕ್ಷಕರಾದ ಎಂ. ನಾಯಕ್ ವಹಿಸಿದ್ದರು. ತಾಲೂಕಿನ ವಿವಿಧ ಹಳ್ಳಿಗಳಿಂದ ಬಂದ ದಲಿತ ಮುಖಂಡರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

Share This Article
Leave a Comment