ನಾಡಿನ ಹಿರಿಯಚೇತನ, ವೃಕ್ಷಮಾತೆ ಪದ್ಮಶ್ರೀ ಶ್ರೀ ಸಾಲುಮರದ ತಿಮ್ಮಕ್ಕ ಅವರು ನಮ್ಮನ್ನು ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಯಿತು. ಅವರಿಗೆ ನನ್ನ ಭಾವಪೂರ್ಣ ನಮನಗಳು.
ಸಸಿಗಳನ್ನೇ ಮಕ್ಕಳೆಂದು ಭಾವಿಸಿ, ನೀರು ಎರೆದು ಅವುಗಳನ್ನು ಪೋಷಿಸಿ ಸಾವಿರಾರು ಮರಗಳನ್ನು ಬೆಳೆಸುವ ಮುಖೇನ ವಿಶ್ವಕ್ಕೆ ಮಾದರಿಯಾಗಿದ್ದರು. ಯಾವುದೇ ಸ್ವಾರ್ಥ, ಫಲಾಪೇಕ್ಷೆಯಿಲ್ಲದೆ ಪರಿಸರ ಮತ್ತು ಜೀವಸಂಕುಲವನ್ನು ಸಂರಕ್ಷಿಸಿದ ಮಾತೆ ಸಾಲುಮರದ ತಿಮ್ಮಕ್ಕನವರ ಕೊಡುಗೆ ಅವಿಸ್ಮರಣೀಯ. ಅವರ ಅಗಲಿಕೆಯು ನಾಡಿಗೆ ಮತ್ತು ಪರಿಸರ ಲೋಕಕ್ಕೆ ತುಂಬಲಾಗದ ನಷ್ಟ. ನಾಡು ಅವರನ್ನು ಸದಾ ಸ್ಮರಿಸಲಿದೆ.
ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ. ದುಃಖತಪ್ತ ಅವರ ಕುಟುಂಬವರ್ಗ, ಅಭಿಮಾನಿಗಳ ಬಳಗ ಹಾಗೂ ಪರಿಸರ ಪ್ರೇಮಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ.


