ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ‘ಉಗ್ರಂ ಮಂಜು’ ಎಂದೇ ಮನೆಮಾತಾಗಿರುವ ನಟ ಮಂಜುನಾಥ್ ಗೌಡ ಅವರು ನೆನ್ನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಿಗ್ಬಾಸ್ ಮಾಜಿ ಸ್ಪರ್ಧಿಯಾಗಿಯೂ ಪರಿಚಿತರಾಗಿರುವ ಉಗ್ರಂ ಮಂಜು ಅವರು ಸಂಧ್ಯಾ ಅವರೊಂದಿಗೆ ಪವಿತ್ರ ವೈವಾಹಿಕ ಬಂಧನಕ್ಕೆ ಕಾಲಿಟ್ಟಿದ್ದಾರೆ.
ಪ್ರಶಾಂತ್ ನೀಲ್ ನಿರ್ದೇಶನದ ‘ಉಗ್ರಂ’ ಚಿತ್ರದಲ್ಲಿ ಖಳನಟನಾಗಿ ಮಂಜುನಾಥ್ ಗೌಡ ಅವರು ನೀಡಿದ ಪ್ರಭಾವಿ ಅಭಿನಯದಿಂದಲೇ ‘ಉಗ್ರಂ’ ಎಂಬ ಹೆಸರು ಅವರೊಂದಿಗೆ ಅಂಟಿಕೊಂಡಿತು. ಆ ಪಾತ್ರವೇ ಅವರಿಗೆ ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಗುರುತನ್ನು ತಂದುಕೊಟ್ಟಿತು.
ಇಂದು (ಜನವರಿ 23) ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಧರ್ಮಸ್ಥಳದಲ್ಲಿ ಉಗ್ರಂ ಮಂಜು ಮತ್ತು ಸಂಧ್ಯಾ ಅವರು ಸರಳ ಹಾಗೂ ಸಂಪ್ರದಾಯಬದ್ಧವಾಗಿ ವಿವಾಹವಾಗಿದ್ದಾರೆ.

ವಧು ಸಂಧ್ಯಾ ಅವರು ಸ್ಪರ್ಶ್ ಆಸ್ಪತ್ರೆಯ ಆಡಳಿತ (Admin) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು Transplant Coordinator ಎಂದು ಪರಿಚಯಿಸಿಕೊಂಡಿದ್ದಾರೆ.
ಉಗ್ರಂ ಮಂಜು ಅವರ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಈ ಕ್ಷಣಕ್ಕೆ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.


