ಭಾರತ ಮಂಟಪದಲ್ಲಿ ವಿಶೇಷ ಯೋಗ ದಿನಾಚರಣೆ: 1,500 ಹಿರಿಯ ನಾಗರಿಕರ ಭಾಗಿ

1 Min Read
1 Min Read

ನವದೆಹಲಿ: 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ (IDY-2026) ಅಂಗವಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ನಾಳೆ ನವದೆಹಲಿಯ ಭಾರತ ಮಂಟಪದಲ್ಲಿ ವಿಶೇಷ ಯೋಗ ಕಾರ್ಯಕ್ರಮವನ್ನು ಆಯೋಜಿಸಿದೆ. ದೇಶವ್ಯಾಪಿ ನಡೆಯುತ್ತಿರುವ ಯೋಗ ದಿನಾಚರಣೆಗಳ ಭಾಗವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಸುಮಾರು 1,500 ಹಿರಿಯ ನಾಗರಿಕರು ಭಾಗವಹಿಸುವ ನಿರೀಕ್ಷೆಯಿದೆ.

ಈ ವರ್ಷದ ಅಂತರರಾಷ್ಟ್ರೀಯ ಯೋಗ ದಿನದ ಪ್ರಮುಖ ವಿಷಯವಾದ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ (Yoga for Healthy Ageing) ಪರಿಕಲ್ಪನೆಗೆ ಅನುಗುಣವಾಗಿ ಕಾರ್ಯಕ್ರಮವನ್ನು ರೂಪಿಸಲಾಗಿದೆ.

ಹಿರಿಯ ನಾಗರಿಕರ ದೀರ್ಘಾಯುಷ್ಯ, ಮಾನಸಿಕ ಆರೋಗ್ಯ, ಭಾವನಾತ್ಮಕ ನೆಮ್ಮದಿ ಹಾಗೂ ಗೌರವಯುತ ಜೀವನಶೈಲಿಗೆ ಯೋಗವನ್ನು ಪರಿಣಾಮಕಾರಿ ಮತ್ತು ಸುಸ್ಥಿರ ಮಾರ್ಗವಾಗಿ ಉತ್ತೇಜಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಂದ ಸಾಮೂಹಿಕ ಯೋಗಾಭ್ಯಾಸ ನಡೆಯಲಿದ್ದು, ಇದರ ಜೊತೆಗೆ ಸಚೇತನ ಜೀವನ, ಆಂತರಿಕ ಶಾಂತಿ, ಭಾವನಾತ್ಮಕ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತ ವಿಶೇಷ ಆಧ್ಯಾತ್ಮಿಕ ಉಪನ್ಯಾಸವೂ ಆಯೋಜಿಸಲಾಗಿದೆ.

ಯೋಗದ ಮೂಲಕ ದೈಹಿಕ ಮತ್ತು ಮಾನಸಿಕ ಕ್ಷೇಮವನ್ನು ವೃದ್ಧಿಸಬಹುದು ಎಂಬ ಸಂದೇಶವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಈ ವಿಶೇಷ ಆಚರಣೆ ನಡೆಸಲಾಗುತ್ತಿದೆ.

Share This Article
Leave a Comment