ಆರ್ಮೇನಿಯಾ ಚುನಾವಣೆಯಲ್ಲಿ ಪಶಿನಿಯನ್ ಗೆಲುವು: ಪ್ರಧಾನಿ ಮೋದಿ ಅಭಿನಂದನೆ

1 Min Read
1 Min Read

ಆರ್ಮೇನಿಯಾದಲ್ಲಿ ನಡೆದ ಇತ್ತೀಚಿನ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ನಿಕೋಲ್ ಪಶಿನಿಯನ್ ಮತ್ತು ಅವರ ಪಕ್ಷದ ಜಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಇಬ್ಬರು ನಾಯಕರ ನಡುವೆ ನಿನ್ನೆ ದೂರವಾಣಿ ಸಂಭಾಷಣೆ ನಡೆದಿದ್ದು, ಮೋದಿ ಅವರು ಪಶಿನಿಯನ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ಇದೇ ವೇಳೆ, ಪಶಿನಿಯನ್ ಅವರು ಇತ್ತೀಚಿನ ಪಶ್ಚಿಮ ಏಷ್ಯಾದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ ಭಾರತೀಯ ನಾಗರಿಕರ ಸ್ಥಳಾಂತರಕ್ಕೆ ನೆರವಾದಕ್ಕಾಗಿ ಭಾರತಕ್ಕೆ ಧನ್ಯವಾದಗಳನ್ನು ತಿಳಿಸಿದರು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಭಾರತ ಮತ್ತು ಆರ್ಮೇನಿಯಾ ನಡುವಿನ ಬಲಿಷ್ಠ ಹಾಗೂ ಬಹುಮುಖ ಸಹಕಾರವನ್ನು ಇನ್ನಷ್ಟು ವಿಸ್ತರಿಸುವ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದ್ದಾರೆ ಎಂದು ತಿಳಿಸಿದ್ದಾರೆ.

ವ್ಯಾಪಾರ, ರಕ್ಷಣಾ ಕ್ಷೇತ್ರ, ತಂತ್ರಜ್ಞಾನ ಹಾಗೂ ಜನ–ಜನ ಸಂಪರ್ಕ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆದಿದ್ದು, ಭಾರತ–ಆರ್ಮೇನಿಯಾ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಪಶಿನಿಯನ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

Share This Article