ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ; ಬ್ರೆಂಟ್‌ 72 ಡಾಲರ್ ದಾಟಿತು

0 Min Read
0 Min Read

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ; ಬ್ರೆಂಟ್‌ 72 ಡಾಲರ್ ದಾಟಿತು

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲೇ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ದಾಖಲಾಗಿದೆ.

ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.0.8ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 72.58 ಅಮೆರಿಕನ್ ಡಾಲರ್‌ಗೆ ವಹಿವಾಟಾಗುತ್ತಿದೆ.

ಇದೇ ವೇಳೆ, ವೆಸ್ಟ್ ಟೆಕ್ಸಾಸ್ ಇಂಟರ್‌ಮೀಡಿಯೇಟ್ (WTI) ಕಚ್ಚಾ ತೈಲದ ಬೆಲೆ ಶೇ.1.2ರಷ್ಟು ಹೆಚ್ಚಳಗೊಂಡು ಪ್ರತಿ ಬ್ಯಾರೆಲ್‌ಗೆ 70.03 ಅಮೆರಿಕನ್ ಡಾಲರ್‌ಗೆ ತಲುಪಿದೆ.

ಜಾಗತಿಕ ಬೇಡಿಕೆ, ಪೂರೈಕೆ ಪರಿಸ್ಥಿತಿ ಹಾಗೂ ಭೌರಾಜಕೀಯ ಬೆಳವಣಿಗೆಗಳ ಪರಿಣಾಮವಾಗಿ ಕಚ್ಚಾ ತೈಲದ ದರದಲ್ಲಿ ಏರಿಳಿತ ಮುಂದುವರಿದಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Share This Article
Leave a Comment