ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿ ಖಂಡಿಸಿದ ಭಾರತ; 36 ನಾಗರಿಕರ ಸಾವಿಗೆ ತೀವ್ರ ಆಕ್ರೋಶ

1 Min Read
1 Min Read

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿ ಖಂಡಿಸಿದ ಭಾರತ; 36 ನಾಗರಿಕರ ಸಾವಿಗೆ ತೀವ್ರ ಆಕ್ರೋಶ

ಅಫ್ಘಾನಿಸ್ತಾನದ ವಸತಿ ಪ್ರದೇಶಗಳ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿ 36 ಮಂದಿ ನಾಗರಿಕರು ಮೃತಪಟ್ಟಿದ್ದು, 163ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), ಪಾಕಿಸ್ತಾನದ ಈ ಕ್ರಮವನ್ನು ಅಫ್ಘಾನಿಸ್ತಾನದ ಸಾರ್ವಭೌಮತ್ವದ ಮೇಲಿನ ನೇರ ದಾಳಿ ಹಾಗೂ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಗಂಭೀರ ಬೆದರಿಕೆ ಎಂದು ಬಣ್ಣಿಸಿದೆ.

ಪಾಕಿಸ್ತಾನ ತನ್ನ ಆಂತರಿಕ ವೈಫಲ್ಯಗಳನ್ನು ಮರೆಮಾಚಲು ಗಡಿಯನ್ನು ದಾಟಿ ಹಿಂಸಾತ್ಮಕ ಕೃತ್ಯಗಳಿಗೆ ಮುಂದಾಗುತ್ತಿರುವುದು ಅದರ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದ ನಡೆಗೆ ಮತ್ತೊಂದು ಉದಾಹರಣೆಯಾಗಿದೆ ಎಂದು ಸಚಿವಾಲಯ ಹೇಳಿದೆ.

ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭಾರತ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದೆ. ಜೊತೆಗೆ, ಅಫ್ಘಾನಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಭಾರತ ತನ್ನ ಅಚಲ ಬೆಂಬಲವನ್ನು ಪುನರುಚ್ಚರಿಸಿದೆ.

Share This Article
Leave a Comment