ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನ; CISC ಆಗಿ ಏರ್ ಮಾರ್ಷಲ್ ತೇಜಿಂದರ್ ಸಿಂಗ್ ಅಧಿಕಾರ ಸ್ವೀಕರಿಸಿದರು

1 Min Read
1 Min Read

ಸಮಗ್ರ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾಗಿ ಏರ್ ಮಾರ್ಷಲ್ ತೇಜಿಂದರ್ ಸಿಂಗ್ ಅಧಿಕಾರ ಸ್ವೀಕಾರ

ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಟು ಚೇರ್ಮನ್, ಚೀಫ್ಸ್ ಆಫ್ ಸ್ಟಾಫ್ ಕಮಿಟಿ (CISC) ಹುದ್ದೆಯನ್ನು ಏರ್ ಮಾರ್ಷಲ್ ತೇಜಿಂದರ್ ಸಿಂಗ್ ಇಂದು ಅಧಿಕೃತವಾಗಿ ವಹಿಸಿಕೊಂಡರು.

ಹೊಸ ಜವಾಬ್ದಾರಿ ಸ್ವೀಕರಿಸಿದ ಬಳಿಕ ಅವರು ನವದೆಹಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ದೇಶದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಪುಷ್ಪಚಕ್ರ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಅವರಿಗೆ ತ್ರಿಸೇನೆಗಳ ವತಿಯಿಂದ ಸಾಂಪ್ರದಾಯಿಕ ಗಾರ್ಡ್ ಆಫ್ ಆನರ್ ನೀಡಲಾಯಿತು.

ರಕ್ಷಣಾ ಸಚಿವಾಲಯದ ಮಾಹಿತಿ ಪ್ರಕಾರ, ಏರ್ ಮಾರ್ಷಲ್ ತೇಜಿಂದರ್ ಸಿಂಗ್ ಅವರು 1987ರ ಜೂನ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ಸೇರ್ಪಡೆಯಾಗಿದ್ದು, 4,500 ಗಂಟೆಗಳಿಗೂ ಅಧಿಕ ಹಾರಾಟದ ಅನುಭವ ಹೊಂದಿದ್ದಾರೆ.

ತಮ್ಮ ಸುದೀರ್ಘ ಸೇವಾ ಅವಧಿಯಲ್ಲಿ ಅವರು ಫೈಟರ್ ಸ್ಕ್ವಾಡ್ರನ್, ರಾಡಾರ್ ಸ್ಟೇಷನ್, ಪ್ರಮುಖ ಫೈಟರ್ ಏರ್‌ಬೇಸ್ ಹಾಗೂ ಜಮ್ಮು-ಕಾಶ್ಮೀರದ ಏರ್ ಆಫೀಸರ್ ಕಮಾಂಡಿಂಗ್ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಅವರ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 2007ರಲ್ಲಿ ವಾಯು ಸೇನಾ ಪದಕ, 2022ರಲ್ಲಿ ಅತಿ ವಿಶಿಷ್ಟ ಸೇವಾ ಪದಕ ಹಾಗೂ 2026ರಲ್ಲಿ ಪರಮ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಾಗಿದೆ.

Share This Article
Leave a Comment