ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಇಶಾನ್ ಕಿಶನ್ ನಂ.1 ಬ್ಯಾಟರ್; ಅಭಿಷೇಕ್ ಶರ್ಮಾಗೆ ಹಿನ್ನಡೆ
ಭಾರತದ ವಿಕೆಟ್‌ಕೀಪರ್-ಬ್ಯಾಟರ್ ಇಶಾನ್ ಕಿಶನ್ ಐಸಿಸಿ ಬಿಡುಗಡೆ ಮಾಡಿದ ನೂತನ ಆಟಗಾರರ ರ‍್ಯಾಂಕಿಂಗ್‌ನಲ್ಲಿ ವಿಶ್ವದ ನಂಬರ್ ಒನ್ ಟಿ20 ಅಂತಾರಾಷ್ಟ್ರೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಅವರು ತಂಡದ ಸಹ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.
ಇಂದು ಪ್ರಕಟವಾದ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಇಶಾನ್ ಕಿಶನ್ ತಮ್ಮ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ದಾಖಲಿಸಿದ್ದಾರೆ. ಇತ್ತೀಚೆಗೆ ಬೆಲ್ಫಾಸ್ಟ್‌ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 0-2 ಅಂತರದಿಂದ ಸೋತಿದ್ದರೂ, ಈ ವರ್ಷದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಇಶಾನ್ ಕಿಶನ್ ನೀಡಿದ ಅದ್ಭುತ ಪ್ರದರ್ಶನ ಅವರಿಗೆ ಅಗ್ರಸ್ಥಾನ ತಂದುಕೊಟ್ಟಿದೆ.
ಎಡಗೈ ಬ್ಯಾಟರ್ ಆಗಿರುವ ಇಶಾನ್ ಕಿಶನ್, ಟಿ20 ವಿಶ್ವಕಪ್‌ನಲ್ಲಿ 317 ರನ್‌ಗಳನ್ನು ಸುಮಾರು 200ರ ಸ್ಟ್ರೈಕ್‌ರೇಟ್‌ನಲ್ಲಿ ಗಳಿಸಿ ಗಮನಾರ್ಹ ಪ್ರದರ್ಶನ ನೀಡಿದ್ದರು.
ಇನ್ನೊಂದೆಡೆ, ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ತಮ್ಮ ವೃತ್ತಿಜೀವನದಲ್ಲೇ ಮೊದಲ ಬಾರಿಗೆ ಐಸಿಸಿ ಟೆಸ್ಟ್ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ.


