ಗ್ರಾಮೀಣ ಉದ್ಯೋಗಕ್ಕೆ ಹೊಸ ಅಧ್ಯಾಯ; VB-G RAM G ಕಾಯ್ದೆ ಐತಿಹಾಸಿಕ ಮೈಲಿಗಲ್ಲು ಎಂದ ಶಿವರಾಜ್ ಸಿಂಗ್ ಚೌಹಾಣ್

1 Min Read
1 Min Read

VB-G RAM G ಕಾಯ್ದೆ ಜಾರಿ; ಗ್ರಾಮೀಣ ಕುಟುಂಬಗಳಿಗೆ 125 ದಿನಗಳ ಉದ್ಯೋಗ ಖಾತರಿ

ವಿಕಸಿತ ಭಾರತ–ಉದ್ಯೋಗ ಮತ್ತು ಜೀವನೋಪಾಯ ಖಾತರಿ ಮಿಷನ್ (ಗ್ರಾಮೀಣ) [VB-G RAM G] ಕಾಯ್ದೆ–2025 ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇದನ್ನು ಗ್ರಾಮೀಣ ಭಾರತದ ಅಭಿವೃದ್ಧಿಯತ್ತ ಮಹತ್ವದ ಹೆಜ್ಜೆ ಹಾಗೂ ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಸಚಿವರು, ಈ ಹೊಸ ಕಾಯ್ದೆ ಗ್ರಾಮೀಣ ಕಾರ್ಮಿಕರ ಘನತೆ, ಸ್ವಾಭಿಮಾನ ಮತ್ತು ಸುರಕ್ಷಿತ ಜೀವನೋಪಾಯವನ್ನು ಖಚಿತಪಡಿಸುವ ನೂತನ ಅಧ್ಯಾಯಕ್ಕೆ ಚಾಲನೆ ನೀಡಿದೆ ಎಂದು ಹೇಳಿದ್ದಾರೆ.

ಈ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ಕಾನೂನುಬದ್ಧ ಉದ್ಯೋಗ ಖಾತರಿ ನೀಡಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದ್ದು, ಶಾಶ್ವತ ಸಮುದಾಯ ಆಸ್ತಿಗಳ ನಿರ್ಮಾಣಕ್ಕೆ ಉತ್ತೇಜನ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಈ ಯೋಜನೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವುದರ ಜೊತೆಗೆ ಸ್ವಾವಲಂಬಿ ಗ್ರಾಮೀಣ ಭಾರತದ ನಿರ್ಮಾಣದ ಕನಸಿಗೆ ಹೊಸ ಚೈತನ್ಯ ನೀಡಲಿದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

Share This Article
Leave a Comment