ಮುಂದಿನ ಎರಡು ದಿನಗಳಲ್ಲಿ ದೆಹಲಿ, ಹರಿಯಾಣ, ಪಂಜಾಬ್‌ಗೆ ಮುಂಗಾರು ಪ್ರವೇಶ ಸಾಧ್ಯ

1 Min Read
1 Min Read

ದೆಹಲಿ ಸೇರಿ ಉತ್ತರ ಭಾರತದತ್ತ ಮುನ್ನಡೆಯುತ್ತಿರುವ ಮುಂಗಾರು; ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ

ನೈಋತ್ಯ ಮುಂಗಾರು ಮುಂದಿನ ಎರಡು ದಿನಗಳಲ್ಲಿ ದೆಹಲಿ, ಹರಿಯಾಣ, ಚಂಡೀಗಢ ಮತ್ತು ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಪ್ರಕಟಿಸಿದ ವರದಿ ಪ್ರಕಾರ, ಮುಂಗಾರು ಇದೇ ಅವಧಿಯಲ್ಲಿ ಉತ್ತರ ಅರಬ್ಬಿ ಸಮುದ್ರ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ ಹಾಗೂ ರಾಜಸ್ಥಾನದ ಹಲವು ಭಾಗಗಳಿಗೂ ಪ್ರವೇಶಿಸಲಿದೆ.

ಇದರ ಜೊತೆಗೆ ಕರಾವಳಿ ಕರ್ನಾಟಕ, ಗುಜರಾತ್, ಕೊಂಕಣ, ಗೋವಾ ಹಾಗೂ ಮಧ್ಯ ಮಹಾರಾಷ್ಟ್ರದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನೂ ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಒಡಿಶಾ, ಸೌರಾಷ್ಟ್ರ, ಕಚ್, ಉತ್ತರಾಖಂಡ ಹಾಗೂ ವಿದರ್ಭ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಅದೇ ರೀತಿ ಬಿಹಾರ, ಒಳನಾಡು ಕರ್ನಾಟಕ, ಜಮ್ಮು-ಕಾಶ್ಮೀರ, ಲಡಾಖ್, ಜಾರ್ಖಂಡ್, ಕೇರಳ, ಮಾಹೆ, ತೆಲಂಗಾಣ, ಉತ್ತರ ಪ್ರದೇಶ ಹಾಗೂ ಈಶಾನ್ಯ ಭಾರತದ ಕೆಲವು ರಾಜ್ಯಗಳಲ್ಲಿ ಶನಿವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ.

ಇತ್ತ ರಾಷ್ಟ್ರ ರಾಜಧಾನಿ ದೆಹಲಿ ಇಂದು ಬೆಳಗ್ಗೆ ಉತ್ತಮ ಮಳೆಯೊಂದಿಗೆ ಎಚ್ಚರಗೊಂಡಿದ್ದು, ನಗರದ ವಿವಿಧ ಭಾಗಗಳಲ್ಲಿ ಸುರಿದ ಮಳೆಯಿಂದ ಕಳೆದ ಕೆಲವು ದಿನಗಳಿಂದ ಕಾಡುತ್ತಿದ್ದ ಉಷ್ಣ ವಾತಾವರಣಕ್ಕೆ ಜನರು ಕೊಂಚ ನೆಮ್ಮದಿ ಕಂಡಿದ್ದಾರೆ.

Share This Article
Leave a Comment