ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ಬಲವರ್ಧನೆಗೆ ಕೇಂದ್ರದ ಮಹತ್ವದ ಕಾರ್ಯಾಗಾರ

1 Min Read
1 Min Read

ದೆಹಲಿದಲ್ಲಿ ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ಸಚಿವರ ಕಾರ್ಯಾಗಾರ; 16ನೇ ಹಣಕಾಸು ಆಯೋಗದ ಶಿಫಾರಸುಗಳ ಚರ್ಚೆ

16ನೇ ಹಣಕಾಸು ಆಯೋಗದ ಶಿಫಾರಸುಗಳ ಪರಿಣಾಮಕಾರಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಪಂಚಾಯತ್ ರಾಜ್ ಸಚಿವಾಲಯ ಇಂದು ನವದೆಹಲಿಯಲ್ಲಿ ರಾಜ್ಯ ಪಂಚಾಯತ್ ರಾಜ್ ಸಚಿವರ ರಾಷ್ಟ್ರೀಯ ಕಾರ್ಯಾಗಾರ ಆಯೋಜಿಸಿದೆ.

ಈ ಕಾರ್ಯಾಗಾರಕ್ಕೆ ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ (ಲಾಲನ್ ಸಿಂಗ್) ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಹಾಯಕ ಸಚಿವ ಪ್ರೊ. ಎಸ್.ಪಿ. ಸಿಂಗ್ ಬಘೇಲ್ ಉಪಸ್ಥಿತರಿರಲಿದ್ದಾರೆ.

ಕಾರ್ಯಾಗಾರದಲ್ಲಿ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ ಬಿಡುಗಡೆ ಮಾಡಿರುವ 16ನೇ ಹಣಕಾಸು ಆಯೋಗದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅನುದಾನ ಜಾರಿಗೆ ಸಂಬಂಧಿಸಿದ ಕಾರ್ಯಾಚರಣಾ ಮಾರ್ಗಸೂಚಿಗಳ ಕುರಿತು ಸವಿಸ್ತಾರ ಚರ್ಚೆ ನಡೆಯಲಿದೆ.

ಇದರ ಜೊತೆಗೆ, ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆಯನ್ನು ಹೆಚ್ಚಿಸುವ ಉದ್ದೇಶದಿಂದ ಸ್ವಂತ ಆದಾಯ ಮೂಲಗಳ (Own Source Revenue – OSR) ವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ತಮ್ಮ ಉತ್ತಮ ಆಡಳಿತ ಮಾದರಿಗಳು, ಅನುಷ್ಠಾನದ ಅನುಭವಗಳು, ಸವಾಲುಗಳು ಹಾಗೂ ಪರಿಣಾಮಕಾರಿ ಕಾರ್ಯತಂತ್ರಗಳನ್ನು ಹಂಚಿಕೊಳ್ಳಲು ಈ ಕಾರ್ಯಾಗಾರ ವೇದಿಕೆಯಾಗಲಿದೆ.

ಈ ಚರ್ಚೆಗಳು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ‘ವಿಕಸಿತ ಭಾರತ @2047’ ಪರಿಕಲ್ಪನೆಗೆ ಅನುಗುಣವಾಗಿ ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ ಗ್ರಾಮೀಣ ಆಡಳಿತ, ಮೂಲಸೌಕರ್ಯ, ಸಾರ್ವಜನಿಕ ಸೇವೆಗಳು ಹಾಗೂ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ಬಲ ತುಂಬುವ ಅನುಷ್ಠಾನ ಚೌಕಟ್ಟನ್ನು ರೂಪಿಸಲು ನೆರವಾಗಲಿವೆ.

ಹಣಕಾಸು ಆಯೋಗದ ಅನುದಾನ ಬಿಡುಗಡೆ ಹಾಗೂ ಬಳಕೆ, ನಿಗದಿತ ನಿಯಮಗಳ ಪಾಲನೆ, ಅನುದಾನ ವಿತರಣಾ ಪ್ರಕ್ರಿಯೆ, ಸಂಸ್ಥೆಗಳ ಸಿದ್ಧತೆ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳು ಅನುದಾನವನ್ನು ಸಮಯೋಚಿತವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ವ್ಯವಸ್ಥೆಗಳ ಕುರಿತೂ ಕಾರ್ಯಾಗಾರದಲ್ಲಿ ಸಮಗ್ರ ಚರ್ಚೆ ನಡೆಯಲಿದೆ.

Share This Article
Leave a Comment