ಜಿಂಬಾಬ್ವೆ ವಿರುದ್ಧ ಟಿ20 ಸರಣಿಗೆ ಭಾರತ ತಂಡ ಘೋಷಣೆ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

1 Min Read
1 Min Read

ನವದೆಹಲಿ: ಜಿಂಬಾಬ್ವೆ ಪ್ರವಾಸಕ್ಕಾಗಿ ಭಾರತ ಪುರುಷರ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. ಮೂರು ಪಂದ್ಯಗಳ ಟಿ20 ಸರಣಿಯು ಇದೇ ತಿಂಗಳ 23, 25 ಮತ್ತು 27ರಂದು ಹರಾರೆಯಲ್ಲಿ ನಡೆಯಲಿದೆ.

ಶ್ರೇಯಸ್ ಅಯ್ಯರ್ ತಂಡದ ನಾಯಕರಾಗಿದ್ದು, ತಿಲಕ್ ವರ್ಮಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ವಿಜೇತ ವಿಕೆಟ್‌ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರಿಗೆ ಈ ಬಾರಿ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಅವರ ಬದಲಿಗೆ ಪಂಜಾಬ್‌ನ ವಿಕೆಟ್‌ಕೀಪರ್-ಬ್ಯಾಟರ್ ಪ್ರಭ್‌ಸಿಮ್ರನ್ ಸಿಂಗ್ ಅವರಿಗೆ ಮೊದಲ ಬಾರಿಗೆ ಭಾರತ ತಂಡದಲ್ಲಿ ಅವಕಾಶ ನೀಡಲಾಗಿದೆ.

ಇದೇ ವೇಳೆ ವೇಗದ ಬೌಲರ್‌ಗಳಾದ ಯಶ್ ಠಾಕೂರ್ ಹಾಗೂ ಅಶೋಕ್ ಶರ್ಮಾ ಕೂಡ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಗಾಯದ ಸಮಸ್ಯೆಯಿಂದ ದೂರವಾಗಿದ್ದ ವೇಗಿ ಮಯಾಂಕ್ ಯಾದವ್ 2024ರ ಬಳಿಕ ಮತ್ತೆ ಭಾರತ ತಂಡಕ್ಕೆ ಮರಳಿದ್ದಾರೆ.

ಜಿಂಬಾಬ್ವೆ ಪ್ರವಾಸಕ್ಕೆ ಭಾರತ ಟಿ20 ತಂಡ:

ಶ್ರೇಯಸ್ ಅಯ್ಯರ್ (ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ (ಉಪನಾಯಕ), ಇಶಾನ್ ಕಿಶನ್ (ವಿಕೆಟ್‌ಕೀಪರ್), ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಯಾಂಕ್ ಯಾದವ್ ಹಾಗೂ ಪ್ರಭ್‌ಸಿಮ್ರನ್ ಸಿಂಗ್ (ವಿಕೆಟ್‌ಕೀಪರ್).

ಇನ್ನೊಂದೆಡೆ, ಇದೇ ತಿಂಗಳ 14ರಿಂದ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಗೆ, ಗಾಯಗೊಂಡಿರುವ ನಿತೀಶ್ ಕುಮಾರ್ ರೆಡ್ಡಿ ಅವರ ಬದಲಿಗೆ ಶಿವಂ ದುಬೆ ಅವರನ್ನು ತಂಡಕ್ಕೆ ಸೇರಿಸಲಾಗಿದೆ.

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಭಾರತ ತಂಡ:

ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷ್‌ದೀಪ್ ಸಿಂಗ್, ಗುರ್ನೂರ್ ಬ್ರಾರ್ ಹಾಗೂ ಶಿವಂ ದುಬೆ.

Share This Article