ಟಿಬಿ ಮುಕ್ತ ಭಾರತದತ್ತ ಕೇಂದ್ರದ ಮತ್ತೊಂದು ಹೆಜ್ಜೆ: ಎಲ್ಲ ಸಚಿವಾಲಯಗಳ ಸಮನ್ವಯಕ್ಕೆ ನಡ್ಡಾ ಕರೆ

1 Min Read
1 Min Read

ನವದೆಹಲಿ: ದೇಶವನ್ನು ಕ್ಷಯರೋಗ (ಟಿಬಿ) ಮುಕ್ತವಾಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಕಾರ್ಯತಂತ್ರ ರೂಪಿಸಿದ್ದು, ಟಿಬಿ ಮುಕ್ತ ಭಾರತ ಅಭಿಯಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಉಪಸ್ಥಿತರಿದ್ದರು. ಟಿಬಿ ನಿರ್ಮೂಲನೆಗೆ ಸರ್ಕಾರದ ವಿವಿಧ ಸಚಿವಾಲಯಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ನಡ್ಡಾ ಒತ್ತಿಹೇಳಿದರು.

ದೇಶವನ್ನು ಟಿಬಿ ಮುಕ್ತಗೊಳಿಸಲು “ಸಂಪೂರ್ಣ ಸರ್ಕಾರದ (Whole-of-Government) ದೃಷ್ಟಿಕೋನ” ಅತ್ಯಗತ್ಯ ಎಂದು ಅವರು ತಿಳಿಸಿದರು. ಈ ಮಹತ್ವಾಕಾಂಕ್ಷಿ ಅಭಿಯಾನದಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ಮೈ ಭಾರತ (MY Bharat), ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ಸ್ವಯಂಸೇವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಟಿಬಿ ವಿರುದ್ಧದ ಹೋರಾಟವನ್ನು ಜನಾಂದೋಲನವಾಗಿ ರೂಪಿಸಿ, ದೇಶದ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವದೊಂದಿಗೆ ಭಾರತವನ್ನು ಶೀಘ್ರದಲ್ಲೇ ಕ್ಷಯರೋಗ ಮುಕ್ತ ರಾಷ್ಟ್ರವನ್ನಾಗಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

Share This Article