ಹೈದರಾಬಾದ್: ಭಾರತದ 2026ರ ಬ್ರಿಕ್ಸ್ ಅಧ್ಯಕ್ಷತೆಯ ಅಂಗವಾಗಿ 12ನೇ ಬ್ರಿಕ್ಸ್ ಕಾರ್ಮಿಕ ಮತ್ತು ಉದ್ಯೋಗ ಸಚಿವರ ಸಭೆ ಇಂದು ಹೈದರಾಬಾದ್‌ನಲ್ಲಿ ಆರಂಭವಾಗಿದೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಉನ್ನತ ಮಟ್ಟದ ಸಭೆಯಲ್ಲಿ, ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಹ ಭಾಗವಹಿಸಿದ್ದಾರೆ.
ಎರಡು ದಿನಗಳ ಈ ಸಭೆಯಲ್ಲಿ ಸಾಮಾಜಿಕ ಭದ್ರತೆ ಬಲಪಡಿಸುವುದು, ಮಹಿಳೆಯರ ಉದ್ಯೋಗ ಕ್ಷೇತ್ರದಲ್ಲಿನ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು, ಜಾಗತಿಕ ಕೌಶಲ್ಯಗಳ ಮ್ಯಾಪಿಂಗ್, ಹಾಗೂ ಗಿಗ್ ಮತ್ತು ಪ್ಲಾಟ್‌ಫಾರ್ಮ್ ಉದ್ಯೋಗಿಗಳಿಗೆ ಡಿಜಿಟಲ್ ತಂತ್ರಜ್ಞಾನಗಳ ಪರಿಣಾಮಕಾರಿ ಬಳಕೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸದಸ್ಯ ರಾಷ್ಟ್ರಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಚರ್ಚೆ ನಡೆಸಲಿದ್ದಾರೆ.
ಈ ಸಭೆಯು ಬ್ರಿಕ್ಸ್ ರಾಷ್ಟ್ರಗಳ ನಡುವೆ ಕಾರ್ಮಿಕ ಕಲ್ಯಾಣ, ಉದ್ಯೋಗ ನೀತಿಗಳು, ಕೌಶಲ್ಯ ಅಭಿವೃದ್ಧಿ ಮತ್ತು ಸುಸ್ಥಿರ ಉದ್ಯೋಗಾವಕಾಶಗಳ ವಿಸ್ತರಣೆ ಕುರಿತು ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ.


