ಬೆಂಗಳೂರುದಲ್ಲಿ ಬ್ರಿಕ್ಸ್ ರಾಷ್ಟ್ರಗಳ ಮಹತ್ವದ ಒಪ್ಪಂದ; ಪ್ರಮಾಣೀಕರಣ ಸಹಕಾರಕ್ಕೆ ಎಂಒಯು ಸಹಿ

1 Min Read
1 Min Read

ಬೆಂಗಳೂರು: ಬ್ರಿಕ್ಸ್ (BRICS) ಸದಸ್ಯ ರಾಷ್ಟ್ರಗಳು ಪ್ರಮಾಣೀಕರಣ (Standardisation) ಕ್ಷೇತ್ರದಲ್ಲಿ ಪರಸ್ಪರ ಸಹಕಾರವನ್ನು ವಿಸ್ತರಿಸುವ ಉದ್ದೇಶದಿಂದ ಬೆಂಗಳೂರುದಲ್ಲಿ ತಿಳಿವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಲಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಬೆಂಗಳೂರುದಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರೀಯ ಪ್ರಮಾಣೀಕರಣ ಸಂಸ್ಥೆಗಳ ಮುಖ್ಯಸ್ಥರ (Heads of National Standardisation Bodies) ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಒಪ್ಪಂದದ ಮೂಲಕ ಮಾಹಿತಿ ವಿನಿಮಯ, ಅತ್ಯುತ್ತಮ ಕಾರ್ಯಪದ್ಧತಿಗಳ ಹಂಚಿಕೆ, ತಾಂತ್ರಿಕ ಸಹಕಾರ ಹಾಗೂ ಸಾಮರ್ಥ್ಯ ವೃದ್ಧಿಗೆ ಸದಸ್ಯ ರಾಷ್ಟ್ರಗಳ ನಡುವೆ ಉತ್ತೇಜನ ಸಿಗಲಿದೆ ಎಂದು ಹೇಳಿದರು.

ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 5ನೇ ಬ್ರಿಕ್ಸ್ ರಾಷ್ಟ್ರೀಯ ಪ್ರಮಾಣೀಕರಣ ಸಂಸ್ಥೆಗಳ ಮುಖ್ಯಸ್ಥರ ಸಭೆ ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದು, ಬ್ರೆಜಿಲ್, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಇಂಡೋನೇಷ್ಯಾ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸೇರಿದಂತೆ ಒಟ್ಟು 11 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

ಈ ಸಭೆಯ ಪ್ರಮುಖ ಉದ್ದೇಶ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ನಡುವೆ ಪ್ರಮಾಣೀಕರಣ ಕ್ಷೇತ್ರದಲ್ಲಿನ ಸಹಕಾರವನ್ನು ಇನ್ನಷ್ಟು ಬಲಪಡಿಸುವುದು ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

Share This Article