ಆಹಾರ ಉದ್ಯಮದಲ್ಲಿ ತಂತ್ರಜ್ಞಾನವೇ ಭವಿಷ್ಯದ ಶಕ್ತಿ: ಎಫ್‌ಐಸಿಸಿಐ ಫುಡ್‌ವರ್ಡ್‌ನಲ್ಲಿ ಟಿ.ಜಿ. ಭರತ್

1 Min Read
1 Min Read

ನವದೆಹಲಿ: ಆಹಾರ ಉದ್ಯಮವು ಇನ್ನು ಕೇವಲ ಆಹಾರ ಉತ್ಪಾದನೆಗೆ ಮಾತ್ರ ಸೀಮಿತವಾಗಿಲ್ಲ. ತಂತ್ರಜ್ಞಾನ, ನಾವೀನ್ಯತೆ, ಸುಸ್ಥಿರತೆ ಹಾಗೂ ರೈತರು, ಗ್ರಾಹಕರು ಮತ್ತು ಉದ್ಯಮಗಳಿಗೆ ಮೌಲ್ಯ ಸೃಷ್ಟಿಸುವ ದಿಕ್ಕಿನಲ್ಲಿ ವೇಗವಾಗಿ ಬೆಳೆಯುತ್ತಿದೆ ಎಂದು ಆಂಧ್ರ ಪ್ರದೇಶದ ಕೈಗಾರಿಕೆ, ವಾಣಿಜ್ಯ ಮತ್ತು ಆಹಾರ ಸಂಸ್ಕರಣಾ ಸಚಿವ ಟಿ.ಜಿ. ಭರತ್ ಹೇಳಿದ್ದಾರೆ.

ನವದೆಹಲಿದಲ್ಲಿ ನಡೆದ 17ನೇ ಎಫ್‌ಐಸಿಸಿಐ ಫುಡ್‌ವರ್ಡ್ ಇಂಡಿಯಾ-2026 (FICCI Foodworld India 2026) ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಆಹಾರ ಪೂರೈಕೆ ಸರಪಳಿಯನ್ನು (Food Supply Chain) ಬಲಪಡಿಸುವ ರಾಷ್ಟ್ರಗಳು ತಮ್ಮ ಭವಿಷ್ಯವನ್ನೂ ಸುರಕ್ಷಿತಗೊಳಿಸಿಕೊಳ್ಳಲಿವೆ ಎಂದು ಅಭಿಪ್ರಾಯಪಟ್ಟರು.

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ತಂತ್ರಜ್ಞಾನ ಅಳವಡಿಕೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಅವಿನಾಶ್ ಜೋಶಿ, ಆಹಾರ ಸುರಕ್ಷತೆಗೆ (Food Safety) ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದೇ ಆಹಾರ ಸಂಸ್ಕರಣಾ ಕ್ಷೇತ್ರದ ಅಭಿವೃದ್ಧಿಗೆ ಅತ್ಯಂತ ಪ್ರಮುಖ ಅಂಶವಾಗಿದೆ ಎಂದು ಅವರು ಹೇಳಿದರು.

Share This Article