ನವದೆಹಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಮತ್ತೊಂದು ರಾಜಕೀಯ ಹಿನ್ನಡೆಯಾಗಿದ್ದು, ಪಕ್ಷದ ರಾಜ್ಯಸಭಾ ಸದಸ್ಯೆ ಕೊಯೆಲ್ ಮಲ್ಲಿಕ್ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೊಯೆಲ್ ಮಲ್ಲಿಕ್ ಅವರು ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಅವರು ಈ ವರ್ಷದ ಏಪ್ರಿಲ್‌ನಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಕೊಯೆಲ್ ಮಲ್ಲಿಕ್ ಅವರ ರಾಜೀನಾಮೆಯೊಂದಿಗೆ, ರಾಜ್ಯಸಭಾ ಸದಸ್ಯತ್ವ ತ್ಯಜಿಸಿದ ಟಿಎಂಸಿಯ ನಾಲ್ಕನೇ ಸಂಸದೆಯಾಗಿದ್ದಾರೆ.
ಇದಕ್ಕೂ ಮೊದಲು ಟಿಎಂಸಿಯ ರಾಜ್ಯಸಭಾ ಸದಸ್ಯರಾಗಿದ್ದ ಸುಖೇಂದು ಶೇಖರ್ ರಾಯ್, ಸುಷ್ಮಿತಾ ದೇವ್ ಮತ್ತು ಪ್ರಕಾಶ್ ಚಿಕ್ ಬರೈಕ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾಗಿದ್ದರು.
ಕೊಯೆಲ್ ಮಲ್ಲಿಕ್ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಪಕ್ಷದಿಂದ ಅಧಿಕೃತವಾಗಿ ಯಾವುದೇ ಕಾರಣವನ್ನು ಬಹಿರಂಗಪಡಿಸಲಾಗಿಲ್ಲ.


