ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಶುಕ್ರವಾರ 45 ಹೊಸ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು (Ayushman Arogya Mandir) ಉದ್ಘಾಟಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನಗರದ ನಿವಾಸಿಗಳಿಗೆ ಅವರ ಮನೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ದೆಹಲಿಯಲ್ಲಿ 415ಕ್ಕೂ ಹೆಚ್ಚು ಆಯುಷ್ಮಾನ್ ಆರೋಗ್ಯ ಮಂದಿರಗಳು ಕಾರ್ಯನಿರ್ವಹಿಸುತ್ತಿದ್ದು, ಶೀಘ್ರದಲ್ಲೇ 1,100ಕ್ಕೂ ಹೆಚ್ಚು ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಮತ್ತಷ್ಟು ಸುಲಭವಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ಈ ಆರೋಗ್ಯ ಮಂದಿರಗಳನ್ನು ವಿಸ್ತರಿಸಲಾಗುತ್ತಿದ್ದು, ನಾಗರಿಕರಿಗೆ ಮನೆ ಸಮೀಪದಲ್ಲೇ ಅಗತ್ಯ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ ಎಂದು ಅವರು ತಿಳಿಸಿದ್ದಾರೆ.


