ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) NEET (UG) 2026 ಮರುಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶದೊಂದಿಗೆ ದೇಶದಾದ್ಯಂತ 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪದವಿ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಹಾಗೂ ಸಂಬಂಧಿತ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.
ಎನ್‌ಟಿಎ ಪ್ರಕಟಿಸಿರುವ ಮಾಹಿತಿಯಂತೆ, ಎಲ್ಲಾ ಅಭ್ಯರ್ಥಿಗಳು ತಮ್ಮ ಸ್ಕೋರ್‌ಕಾರ್ಡ್‌ಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ವೈದ್ಯಕೀಯ ಪ್ರವೇಶ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆ ನಿಗದಿತ ವೇಳಾಪಟ್ಟಿಯಂತೆ ಸಾಗಲು ಅನುಕೂಲವಾಗುವಂತೆ ಫಲಿತಾಂಶವನ್ನು ಸಮಯಕ್ಕೆ ಸರಿಯಾಗಿ ಪ್ರಕಟಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ವರ್ಷ ನಡೆದ NEET (UG) 2026 ಮರುಪರೀಕ್ಷೆಯಲ್ಲಿ ದೇಶದ 551 ನಗರಗಳ 5,440 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ವಿದೇಶದ 14 ನಗರಗಳಲ್ಲಿ ಸುಮಾರು 20 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಇದೀಗ ಫಲಿತಾಂಶ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಹಾಗೂ ಇತರೆ ಸಂಬಂಧಿತ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಮತ್ತು ಕೌನ್ಸೆಲಿಂಗ್ ಶೀಘ್ರದಲ್ಲೇ ಆರಂಭವಾಗುವ ನಿರೀಕ್ಷೆಯಿದೆ.


