ಯುವಕರ ಪ್ರತಿಯೊಂದು ಆತಂಕಕ್ಕೂ ಸರ್ಕಾರ ಸ್ಪಂದಿಸುತ್ತದೆ: ರಾಜನಾಥ್ ಸಿಂಗ್ ಭರವಸೆ

1 Min Read
1 Min Read

ನವದೆಹಲಿ: ವಿದ್ಯಾರ್ಥಿಗಳು ಹಾಗೂ ಯುವಕರ ಆಶಯಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುವಕರ ಭಾವನೆಗಳು ಮತ್ತು ಆತಂಕಗಳ ಬಗ್ಗೆ ಕೇಂದ್ರ ಸರ್ಕಾರ ಅತ್ಯಂತ ಸೂಕ್ಷ್ಮವಾಗಿ ಸ್ಪಂದಿಸುತ್ತಿದ್ದು, ವಿದ್ಯಾರ್ಥಿಗಳು ಎತ್ತುವ ಪ್ರತಿಯೊಂದು ಪ್ರಶ್ನೆಯನ್ನು ಆಲಿಸಿ ಸೂಕ್ತ ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳನ್ನು ರಾಜಕೀಯ ಸಾಧನವಾಗಿಸಬೇಡಿ

ಕೆಲವರು ತಮ್ಮ ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳು ಮತ್ತು ಯುವಕರನ್ನು ರಾಜಕೀಯ ಸಾಧನವಾಗಿ ಬಳಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜನಾಥ್ ಸಿಂಗ್ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರವು ಯುವಜನರ ಕಲ್ಯಾಣ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದರು.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ

ಪ್ರತಿಪಕ್ಷ ನಾಯಕರು ಯುವಕರು ಹಾಗೂ ಮಕ್ಕಳನ್ನು ದಾರಿತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ರಾಜನಾಥ್ ಸಿಂಗ್, ಇಂತಹ ನಡೆ ದೇಶದ ಹಿತದೃಷ್ಟಿಯಿಂದ ಸೂಕ್ತವಲ್ಲ ಎಂದರು.

ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಸಿದ್ಧ

ಸಂಸತ್ತಿನಲ್ಲಿ ಪ್ರತಿಪಕ್ಷಗಳ ಗದ್ದಲದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಯೊಂದು ವಿಷಯದ ಬಗ್ಗೆ ಅರ್ಥಪೂರ್ಣ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಪುನರುಚ್ಚರಿಸಿದರು.

ಆದರೆ, ಸಂಸತ್ತಿನಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ಬೀದಿಗೆ ತಂದು ಪರಿಹರಿಸಲು ಯತ್ನಿಸುವುದು ಸರಿಯಾದ ಕ್ರಮವಲ್ಲ ಎಂದು ಅವರು ಅಭಿಪ್ರಾಯಪಟ್ಟರು

Share This Article