ಜಿಂಬಾಬ್ವೆ ವಿರುದ್ಧ ಟಿ20 ಸರಣಿಗೆ ಭಾರತದ ಭರ್ಜರಿ ಶುಭಾರಂಭ; 7 ವಿಕೆಟ್‌ಗಳ ಗೆಲುವು

1 Min Read
1 Min Read

ಹರಾರೆ: ಪುರುಷರ ಟಿ20 ಕ್ರಿಕೆಟ್‌ನಲ್ಲಿ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ.

126 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ, ಕೇವಲ 13.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಭಾರತದ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ ಪ್ರಮುಖ ಪಾತ್ರವಹಿಸಿ, ಕೇವಲ 19 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದರು. ಅವರ ಸ್ಪೋಟಕ ಬ್ಯಾಟಿಂಗ್‌ನಿಂದ ಭಾರತ ಸುಲಭವಾಗಿ ಪಂದ್ಯವನ್ನು ತನ್ನದಾಗಿಸಿಕೊಂಡಿತು.

ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು.

ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ನಾಳೆ ಇದೇ ಹರಾರೆ ಮೈದಾನದಲ್ಲಿ ನಡೆಯಲಿದೆ.

Share This Article