NEET ಪ್ರತಿಭಟನೆ ಕುರಿತು ಸೇನಾ ಅಧಿಕಾರಿ ಹೇಳಿಕೆ ಎಂಬುದು ಸುಳ್ಳು; ವೈರಲ್ ವಿಡಿಯೊಗೆ PIB ಫ್ಯಾಕ್ಟ್ ಚೆಕ್

1 Min Read
1 Min Read

ನವದೆಹಲಿ: ಲೆಫ್ಟಿನೆಂಟ್ ಜನರಲ್ ರಾಜೀವ್ ಪುರಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೊ ಸಂಪೂರ್ಣ ನಕಲಿ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಫ್ಯಾಕ್ಟ್ ಚೆಕ್ ಘಟಕ ನೀಡಿರುವ ಮಾಹಿತಿಯ ಪ್ರಕಾರ, ವೈರಲ್ ಆಗಿರುವ ಈ ವಿಡಿಯೊ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ಡೀಪ್‌ಫೇಕ್ (Deepfake) ಆಗಿದೆ.

ವಿಡಿಯೊದಲ್ಲಿ, NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯ ಮೇರೆಗೆ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಹೆಚ್ಚುವರಿ ಸೇನಾಪಡೆ ನಿಯೋಜಿಸಲು ಲೆಫ್ಟಿನೆಂಟ್ ಜನರಲ್ ರಾಜೀವ್ ಪುರಿ ಆದೇಶಿಸಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಲಾಗಿದೆ. ಈ ಮಾಹಿತಿ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು PIB ಸ್ಪಷ್ಟಪಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಂತಹ ತಿರುಚಲಾದ ಹಾಗೂ ದಾರಿತಪ್ಪಿಸುವ ಮಾಹಿತಿಯಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದು PIB ಮನವಿ ಮಾಡಿದೆ.

ಅಧಿಕೃತ ಮೂಲಗಳಿಂದ ದೃಢೀಕರಿಸಿದ ಮಾಹಿತಿಯನ್ನಷ್ಟೇ ನಂಬಬೇಕು ಹಾಗೂ ಪರಿಶೀಲಿಸದ ವಿಡಿಯೊಗಳು ಅಥವಾ ಸಂದೇಶಗಳನ್ನು ಹಂಚಿಕೊಳ್ಳಬಾರದು ಎಂದು ಸಾರ್ವಜನಿಕರಿಗೆ ಸೂಚಿಸಲಾಗಿದೆ.

Share This Article