ಇ-ವಾಹನ ಖರೀದಿದಾರರಿಗೆ ₹25,000 ಪ್ರೋತ್ಸಾಹಧನ; ಮೇಘಾಲಯ ಸರ್ಕಾರದ ಹೊಸ ಘೋಷಣೆ

1 Min Read
1 Min Read

ಶಿಲ್ಲಾಂಗ್: ಎಲೆಕ್ಟ್ರಿಕ್ ವಾಹನಗಳ (EV) ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಮೇಘಾಲಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮೇಘಾಲಯ ಎಲೆಕ್ಟ್ರಿಕ್ ವಾಹನ (EV) ನೀತಿ–2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಹೊಸ ನೀತಿಯಡಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ₹25,000 ಪ್ರೋತ್ಸಾಹಧನ ನೀಡಲಾಗುತ್ತದೆ. ಜೊತೆಗೆ ವಾಹನ ನೋಂದಣಿ ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡಲಾಗುತ್ತದೆ.

ಈ ಯೋಜನೆಯು ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನಗಳಿಗೆ ಅನ್ವಯವಾಗಲಿದೆ. ಅಲ್ಲದೆ, ರಾಜ್ಯದ ವಾಹನ ಸ್ಕ್ರ್ಯಾಪಿಂಗ್ (Scrappage) ನೀತಿಗೆ ಸಂಬಂಧಿಸಿದ ಹೆಚ್ಚುವರಿ ಪ್ರೋತ್ಸಾಹಧನ ನೀಡುವ ಸಾಧ್ಯತೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ.

ಪ್ರಸ್ತುತ ಮೇಘಾಲಯದಲ್ಲಿ 5,000ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದು, ಮುಂದಿನ ದಿನಗಳಲ್ಲಿ ಇ-ವಾಹನಗಳ ಬಳಕೆಯನ್ನು ಇನ್ನಷ್ಟು ವಿಸ್ತರಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಇದರ ಭಾಗವಾಗಿ ರಾಜ್ಯದ ವಿವಿಧ ಗುರುತಿಸಲಾದ ಸ್ಥಳಗಳಲ್ಲಿ ವಾಣಿಜ್ಯ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಜೊತೆಗೆ, ವಾಹನ ಸ್ಕ್ರ್ಯಾಪಿಂಗ್ ಕೇಂದ್ರಗಳನ್ನು ಆರಂಭಿಸಲು ಉದ್ಯಮಿಗಳನ್ನು ಪ್ರೋತ್ಸಾಹಿಸುವ ಯೋಜನೆಯನ್ನೂ ಸರ್ಕಾರ ರೂಪಿಸಿದೆ.

 

Share This Article