ಮಳೆ ಅಬ್ಬರಕ್ಕೂ ಜೇವರ್ ಏರ್‌ಪೋರ್ಟ್ ಡ್ರೈನೇಜ್ ವ್ಯವಸ್ಥೆ ಫುಲ್ ಆ್ಯಕ್ಟಿವ್: YEIDA ಸ್ಪಷ್ಟನೆ

1 Min Read
1 Min Read

ನೋಯ್ಡಾ: ಉತ್ತರ ಪ್ರದೇಶದ ಜೇವರ್ ಪ್ರದೇಶದಲ್ಲಿ ಭಾರಿ ಮಳೆಯಾದರೂ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಹಾಗೂ ವಿಮಾನಗಳ ನಿಲುಗಡೆ ಪ್ರದೇಶ (ಅಪ್ರಾನ್)ದಲ್ಲಿ ಯಾವುದೇ ನೀರು ನಿಂತಿರಲಿಲ್ಲ ಎಂದು ಯಮುನಾ ಎಕ್ಸ್‌ಪ್ರೆಸ್‌ವೇ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (YEIDA) ಸ್ಪಷ್ಟಪಡಿಸಿದೆ.

ಜೇವರ್ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳಲ್ಲಿನ ಒಳಚರಂಡಿ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿತ್ತು ಎಂದು YEIDA ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ರಾಕೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಭಾರಿ ಮಳೆಯ ಪರಿಣಾಮ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಅಲ್ಪಾವಧಿಗೆ ಸಣ್ಣ ಪ್ರಮಾಣದ ನೀರು ನಿಂತಿತ್ತು. ಆದರೆ ಸಂಬಂಧಿತ ತಂಡ ತಕ್ಷಣ ಕಾರ್ಯಪ್ರವೃತ್ತವಾಗಿ ನೀರನ್ನು ತೆರವುಗೊಳಿಸಿತು ಎಂದು ಅವರು ಹೇಳಿದ್ದಾರೆ.

ಭಾರಿ ವಾಹನ ಸಂಚಾರದ ನಡುವೆಯೂ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗಿದ್ದು, ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದ ಮೂಲಸೌಕರ್ಯ, ರನ್‌ವೇ ಮತ್ತು ಅಪ್ರಾನ್ ಪ್ರದೇಶಗಳು ಸಂಪೂರ್ಣ ಸುರಕ್ಷಿತವಾಗಿವೆ ಎಂದು ರಾಕೇಶ್ ಕುಮಾರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಮಳೆಯ ಪರಿಸ್ಥಿತಿಯನ್ನು YEIDA ಆಡಳಿತ ನಿರಂತರವಾಗಿ ಗಮನಿಸುತ್ತಿದ್ದು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಪ್ರಯಾಣಿಕರು ಮತ್ತು ಸಾರ್ವಜನಿಕರ ಅನುಕೂಲಕ್ಕೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಾಧಿಕಾರ ತಿಳಿಸಿದೆ.

Share This Article