ಭಾರತಕ್ಕೆ ಇಂದು ಬೆಲ್ಜಿಯಂ ಪ್ರಧಾನಿ ಬಾರ್ಟ್ ಡಿ ವೀವರ್ ಭೇಟಿ

1 Min Read
1 Min Read

ನವದೆಹಲಿ: ಬೆಲ್ಜಿಯಂ ಪ್ರಧಾನಿ ಬಾರ್ಟ್ ಡಿ ವೀವರ್ ಅವರು ಇಂದಿನಿಂದ ಮೂರು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಉಭಯ ದೇಶಗಳ ನಡುವಿನ ಸಂಬಂಧಗಳ ಸಂಪೂರ್ಣ ವ್ಯಾಪ್ತಿ ಹಾಗೂ ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಭಾರತ-ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ (FTA)ದ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಉದ್ಯಮ ಕಾರ್ಯಕ್ರಮದಲ್ಲೂ ಬಾರ್ಟ್ ಡಿ ವೀವರ್ ಮುಖ್ಯ ಭಾಷಣ ಮಾಡಲಿದ್ದಾರೆ. ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ವ್ಯಾಪಾರ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

ಮುಂಬೈಗೂ ಭೇಟಿ

ಭಾರತ ಪ್ರವಾಸದ ವೇಳೆ ಬೆಲ್ಜಿಯಂ ಪ್ರಧಾನಿ ಮುಂಬೈಗೂ ಭೇಟಿ ನೀಡಲಿದ್ದು, ವಜ್ರೋದ್ಯಮ, ಬಂದರು ಮತ್ತು ಸರಕು ಸಾಗಣೆ-ಸಾರಿಗೆ ಕ್ಷೇತ್ರಗಳ ಪ್ರಮುಖರು ಸೇರಿದಂತೆ ವಿವಿಧ ವಲಯಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಬಾರ್ಟ್ ಡಿ ವೀವರ್ ಅವರ ಭಾರತ ಭೇಟಿ ಉಭಯ ದೇಶಗಳ ನಡುವಿನ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸಲು ಉತ್ತಮ ಅವಕಾಶ ಒದಗಿಸಲಿದೆ.

ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಮತ್ತು ಭದ್ರತೆ, ತಂತ್ರಜ್ಞಾನ, ನವೀಕರಿಸಬಹುದಾದ ಇಂಧನ, ಸಂಪರ್ಕ ವ್ಯವಸ್ಥೆ ಹಾಗೂ ಜನರಿಂದ ಜನರ ನಡುವಿನ ಬಾಂಧವ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಿಸುವ ಕುರಿತು ಗಮನ ಹರಿಸಲಾಗುತ್ತದೆ.

ಇದರ ಜೊತೆಗೆ ಭಾರತ-ಯುರೋಪಿಯನ್ ಒಕ್ಕೂಟ ಹಾಗೂ ಭಾರತ-ಯುರೋಪ್ ನಡುವಿನ ಸಂಬಂಧಗಳನ್ನು ಮತ್ತಷ್ಟು ಗಾಢಗೊಳಿಸುವ ನಿಟ್ಟಿನಲ್ಲೂ ಈ ಭೇಟಿ ಮಹತ್ವದ್ದಾಗಿದೆ ಎಂದು ಸಚಿವಾಲಯ ತಿಳಿಸಿದೆ.

Share This Article