ಕೆನಡಾ ವಿದೇಶಾಂಗ ಸಚಿವೆ ಅನಿತಾ ಆನಂದ್ ಇಂದಿನಿಂದ ಭಾರತ ಪ್ರವಾಸ

1 Min Read
1 Min Read

ನವದೆಹಲಿ: ಕೆನಡಾದ ವಿದೇಶಾಂಗ ಸಚಿವೆ ಅನಿತಾ ಆನಂದ್ ಅವರು ಇಂದಿನಿಂದ ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಅವರು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಜಯಂತ್ ಚೌಧರಿ ಅವರನ್ನು ನಾಳೆ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಭಾರತ ಮತ್ತು ಕೆನಡಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದಿದೆ. ವ್ಯಾಪಾರ, ಹೂಡಿಕೆ ಹಾಗೂ ಜನರ ನಡುವಿನ ಸಂಪರ್ಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಿಸುವ ಸಾಧ್ಯತೆಗಳಿವೆ.

ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಕ್ರಿಸ್ಟೋಫರ್ ಕೂಟರ್ ಮಾತನಾಡಿ, ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ವಿಸ್ತರಿಸಲು ಕೆನಡಾ ಆಸಕ್ತಿ ಹೊಂದಿದೆ ಎಂದು ತಿಳಿಸಿದ್ದಾರೆ. ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದ, ಪರಸ್ಪರ ಹೂಡಿಕೆ ಹೆಚ್ಚಳ ಮತ್ತು ಎರಡೂ ದೇಶಗಳ ನಡುವೆ ಜನರ ಸಂಚಾರಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವುದು ಈ ಪ್ರಯತ್ನದ ಪ್ರಮುಖ ಭಾಗಗಳಾಗಿವೆ ಎಂದು ಹೇಳಿದ್ದಾರೆ.

ಇದಲ್ಲದೆ, ಭಾರತ ಮತ್ತು ಕೆನಡಾ ನಡುವಿನ ಪ್ರವಾಸೋದ್ಯಮ ಕ್ಷೇತ್ರದಲ್ಲಿಯೂ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕ್ಷೇತ್ರದಲ್ಲಿ ಸಹಕಾರ ಹೆಚ್ಚಿಸುವುದರಿಂದ ಉಭಯ ದೇಶಗಳ ಜನರ ನಡುವಿನ ಸಂಪರ್ಕ ಮತ್ತಷ್ಟು ಬಲಗೊಳ್ಳುವ ನಿರೀಕ್ಷೆಯಿದೆ.

Share This Article