NEET-SS 2026 ಪರೀಕ್ಷೆ ಡಿಸೆಂಬರ್ 11 ಮತ್ತು 12ರಂದು: ಅರ್ಜಿ ಸಲ್ಲಿಕೆಗೆ ನವೆಂಬರ್ 18 ಕೊನೆಯ ದಿನ

1 Min Read
1 Min Read

ನವದೆಹಲಿ: ವೈದ್ಯಕೀಯ ಕ್ಷೇತ್ರದ ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-SS) 2026 ಡಿಸೆಂಬರ್ 11 ಮತ್ತು 12ರಂದು ನಡೆಯಲಿದೆ ಎಂದು ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ (NBEMS) ತಿಳಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಮಂಡಳಿಯು, ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷಾ ವಿಧಾನದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅರ್ಹತಾ ಮಾನದಂಡಗಳು, ಪರೀಕ್ಷಾ ಶುಲ್ಕ, ಪರೀಕ್ಷೆಯ ಸ್ವರೂಪ ಹಾಗೂ ಇತರ ಪ್ರಮುಖ ಮಾಹಿತಿಯನ್ನು ಪರಿಶೀಲಿಸಿಕೊಳ್ಳುವಂತೆ NBEMS ಸೂಚಿಸಿದೆ.

ಈ ಎಲ್ಲ ವಿವರಗಳು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿ ಕೈಪಿಡಿಯಲ್ಲಿ ಲಭ್ಯವಿವೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ https://natboard.edu.in ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ತಿಳಿಸಲಾಗಿದೆ.

Share This Article