ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
ಕುಟುಂಬದ ಸದಸ್ಯರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರಜ್ವಲ್ ರೇವಣ್ಣ ಅವರಿಗೆ ಜೈಲು ಆಡಳಿತ ಅನುಮತಿ ನೀಡಿದೆ.
ಈ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಪೆರೋಲ್ (Parole) ಅರ್ಜಿಯನ್ನು ಜೈಲು ಅಧಿಕಾರಿಗಳು ಪರಿಶೀಲಿಸಿದ ಬಳಿಕ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿರುವುದಾಗಿ ತಿಳಿದುಬಂದಿದೆ.
ಅಗತ್ಯ ಭದ್ರತಾ ಕ್ರಮಗಳೊಂದಿಗೆ ಅವರನ್ನು ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಜೈಲು ಆಡಳಿತದಿಂದ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ.


