ಭದ್ರತಾ ಕಾರಣಗಳಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ದೆಹಲಿ ಮೆಟ್ರೋದ ಎಲ್ಲಾ ನಿಲ್ದಾಣಗಳಲ್ಲಿ ಇದೀಗ ಪ್ರಯಾಣಿಕರ ಸೇವೆಯನ್ನು ಪುನರಾರಂಭಿಸಲಾಗಿದೆ.
ದೆಹಲಿ ಮೆಟ್ರೋ ರೈಲು ನಿಗಮ (DMRC) ನೀಡಿದ ಮಾಹಿತಿ ಪ್ರಕಾರ, ಮೆಟ್ರೋ ಜಾಲದ ಎಲ್ಲ ನಿಲ್ದಾಣಗಳು ಮತ್ತೆ ಪ್ರಯಾಣಿಕರಿಗೆ ಮುಕ್ತವಾಗಿದ್ದು, ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ಈ ಹಿಂದೆ ಭದ್ರತಾ ಕಾರಣಗಳಿಂದ 17 ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಅವುಗಳಲ್ಲಿ ಲೋಕ ಕಲ್ಯಾಣ ಮಾರ್ಗ, ರಾಜೀವ್ ಚೌಕ್, ಪಟೇಲ್ ಚೌಕ್, ರಾಮಕೃಷ್ಣ ಆಶ್ರಮ ಮಾರ್ಗ, ಬರಾಖಂಬಾ ರೋಡ್, ಸುಪ್ರೀಂ ಕೋರ್ಟ್, ಸೇವಾ ತೀರ್ಥ, ಜನಪಥ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟೇರಿಯಟ್, ಐಟಿಒ, ದೆಹಲಿ ಗೇಟ್, ಇಂದ್ರಪ್ರಸ್ಥ, ಖಾನ್ ಮಾರ್ಕೆಟ್, ಜೋರ್ ಬಾಗ್, ಶಿವಾಜಿ ಸ್ಟೇಡಿಯಂ ಹಾಗೂ ಝಂಡೇವಾಲನ್ ನಿಲ್ದಾಣಗಳು ಸೇರಿದ್ದವು.
ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ನಿರ್ಬಂಧಗಳನ್ನು ತೆರವುಗೊಳಿಸಲಾಗಿದ್ದು, ಇದೀಗ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಪ್ರವೇಶ ಮತ್ತು ಸಂಚಾರ ಎಂದಿನಂತೆ ಆರಂಭವಾಗಿದೆ.


