ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ವಾವಲಂಬನೆಗೆ ಕೇಂದ್ರದ ಮಹತ್ವದ ಹೆಜ್ಜೆ; ‘ಆತ್ಮನಿರ್ಭರ ಪಂಚಾಯತ್’ ಯೋಜನೆಗೆ ಚಾಲನೆ

1 Min Read
1 Min Read

ನವದೆಹಲಿ: ಭಾರತದ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಯ ಪಯಣದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಹೇಳಿದ್ದಾರೆ.

ನವದೆಹಲಿದಲ್ಲಿ ‘ಆತ್ಮನಿರ್ಭರ ಪಂಚಾಯತ್’ (Atmanirbhar Panchayat Programme) ಕಾರ್ಯಕ್ರಮ ಹಾಗೂ ‘ಸಮರ್ಥ್ ಪಂಚಾಯತ್’ (SAMARTH Panchayat Portal) ಪೋರ್ಟಲ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ವಿಕಸಿತ ಭಾರತ-2047’ ಪರಿಕಲ್ಪನೆಗೆ ಅನುಗುಣವಾಗಿ ಆರ್ಥಿಕವಾಗಿ ಸದೃಢ, ತಂತ್ರಜ್ಞಾನ ಆಧಾರಿತ ಹಾಗೂ ಸ್ವಾವಲಂಬಿ ಗ್ರಾಮ ಪಂಚಾಯಿತಿಗಳನ್ನು ನಿರ್ಮಿಸುವ ದಿಸೆಯಲ್ಲಿ ಈ ಎರಡು ಮಹತ್ವದ ಯೋಜನೆಗಳು ಮೈಲಿಗಲ್ಲಾಗಲಿವೆ ಎಂದು ಸಚಿವರು ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಡಿಜಿಟಲ್ ತಂತ್ರಜ್ಞಾನ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಒದಗಿಸುವ ಮೂಲಕ ತಳಮಟ್ಟದ ಆಡಳಿತವನ್ನು ಇನ್ನಷ್ಟು ಬಲಪಡಿಸಬಹುದು. ಇದರಿಂದ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಅವರು ಹೇಳಿದರು.

ಆತ್ಮನಿರ್ಭರ ಪಂಚಾಯತ್ ಕಾರ್ಯಕ್ರಮದ ಮೂಲಕ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿರುವ ಸ್ಥಳೀಯ ಸಂಪನ್ಮೂಲಗಳು, ಆಸ್ತಿಗಳು ಹಾಗೂ ಅವಕಾಶಗಳನ್ನು ಗುರುತಿಸಿ, ಅವುಗಳನ್ನು ಆದಾಯ ತರುವ ಶಾಶ್ವತ ಯೋಜನೆಗಳಾಗಿ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವರು ವಿವರಿಸಿದರು.

ಇದೇ ವೇಳೆ ‘ಸಮರ್ಥ್ ಪಂಚಾಯತ್’ ಪೋರ್ಟಲ್ ಪಂಚಾಯಿತಿಗಳ ತೆರಿಗೆ ಸಂಗ್ರಹ, ಪಾವತಿ ವ್ಯವಸ್ಥೆ ಹಾಗೂ ಆದಾಯದ ಮೇಲ್ವಿಚಾರಣೆಯನ್ನು ಸಂಪೂರ್ಣ ಪಾರದರ್ಶಕ ಮತ್ತು ಸುಗಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ರಾಜೀವ್ ರಂಜನ್ ಸಿಂಗ್ ಅವರು ಪಂಚಾಯತ್ ರಾಜ್ ಸಂಸ್ಥೆಗಳ ಸ್ವಂತ ಆದಾಯ ಮೂಲಗಳ (Model Own Source of Revenue Rules) ಮಾದರಿ ನಿಯಮಾವಳಿಯನ್ನು ಸಹ ಬಿಡುಗಡೆ ಮಾಡಿದರು.

Share This Article