ನವದೆಹಲಿ: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟ–2026ರ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಭಾರತದ ಅಥ್ಲೀಟ್ ಸರ್ವೇಶ್ ಕುಶಾರೆ ಅವರಿಗೆ ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಸಚಿವರು, ಸರ್ವೇಶ್ ಕುಶಾರೆ ಅವರ ಅದ್ಭುತ ಪ್ರದರ್ಶನ ಇಡೀ ದೇಶವೇ ಹೆಮ್ಮೆಪಡುವಂತಾಗಿದೆ ಎಂದು ಶ್ಲಾಘಿಸಿದ್ದಾರೆ.
ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿರುವ ಸರ್ವೇಶ್ ಅವರ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಲಿ ಎಂದು ಸಚಿವರು ಹಾರೈಸಿದ್ದಾರೆ.


