2020ರ ದೆಹಲಿ ಗಲಭೆ ಪ್ರಕರಣ: ತಾಹಿರ್ ಹುಸೇನ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

1 Min Read
1 Min Read

ನವದೆಹಲಿ: 2020ರ ದೆಹಲಿ ಗಲಭೆ ವೇಳೆ ಗುಪ್ತಚರ ದಳದ (IB) ಅಧಿಕಾರಿ ಅಂಕಿತ್ ಶರ್ಮಾ ಅವರ ಹತ್ಯೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (AAP) ಮಾಜಿ ಕಾರ್ಪೊರೇಟರ್ ತಾಹಿರ್ ಹುಸೇನ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿಯ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರು ಶಿಕ್ಷೆಯ ಪ್ರಮಾಣದ ಕುರಿತು ವಾದ-ಪ್ರತಿವಾದ ಆಲಿಸಿದ ಬಳಿಕ ಎಲ್ಲಾ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಘೋಷಿಸಿದರು.

ತೀರ್ಪು ನೀಡುವ ವೇಳೆ ನ್ಯಾಯಾಲಯ, ಈ ಕೃತ್ಯ ಅತ್ಯಂತ ಗಂಭೀರ ಸ್ವರೂಪದ್ದಾಗಿದ್ದು, ಇಡೀ ಸಮಾಜವನ್ನೇ ಬೆಚ್ಚಿಬೀಳಿಸಿದ ಘಟನೆ ಎಂದು ಅಭಿಪ್ರಾಯಪಟ್ಟಿದೆ.

ಕಳೆದ 13ರಂದು, ಇದೇ ನ್ಯಾಯಾಲಯ ತಾಹಿರ್ ಹುಸೇನ್ ಹಾಗೂ ಇತರ ನಾಲ್ವರನ್ನು ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಘೋಷಿಸಿತ್ತು.

2020ರ ದೆಹಲಿ ಗಲಭೆಯ ಸಂದರ್ಭದಲ್ಲಿ ಗುಂಪೊಂದು ಅಂಕಿತ್ ಶರ್ಮಾ ಅವರ ಮೇಲೆ ಹಲ್ಲೆ ನಡೆಸಿತ್ತು. ಬಳಿಕ ಅವರ ಮೃತದೇಹವು ಚರಂಡಿಯೊಂದರಲ್ಲಿ ಪತ್ತೆಯಾಗಿದ್ದು, ಈ ಪ್ರಕರಣ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

Share This Article