ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಇಂದು ಏರಿಕೆ ಕಂಡಿವೆ. ವಹಿವಾಟಿನ ವೇಳೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.1.4ರಷ್ಟು ಹೆಚ್ಚಾಗಿ ಪ್ರತಿ ಬ್ಯಾರೆಲ್ಗೆ 80.45 ಅಮೆರಿಕನ್ ಡಾಲರ್ಗೆ ತಲುಪಿದೆ.
ಇದೇ ವೇಳೆ, ಅಮೆರಿಕದ ಪ್ರಮುಖ ಕಚ್ಚಾ ತೈಲ ಸೂಚ್ಯಂಕವಾದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಬೆಲೆ ಶೇ.0.8ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್ಗೆ 76.37 ಡಾಲರ್ಗೆ ತಲುಪಿದೆ.
ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತಗಳು ಮುಂದುವರಿದಿದ್ದು, ಕಚ್ಚಾ ತೈಲದ ಬೆಲೆ ಚಲನವಲನದ ಮೇಲೆ ಹೂಡಿಕೆದಾರರು ಹಾಗೂ ಮಾರುಕಟ್ಟೆ ವಲಯದ ಗಮನ ನೆಟ್ಟಿದೆ.


