ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ; ಕರ್ನಾಟಕ ಸೇರಿ ಹಲವು ಪ್ರದೇಶಗಳಿಗೆ IMD ಎಚ್ಚರಿಕೆ

1 Min Read
1 Min Read

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ, ಪೂರ್ವ ಮಧ್ಯಪ್ರದೇಶ, ರಾಜಸ್ಥಾನ, ಕೇರಳ ಮತ್ತು ಮಾಹೆ, ಒಡಿಶಾ ಹಾಗೂ ದಕ್ಷಿಣ ಒಳನಾಡು ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಶಾನ್ಯ ಭಾರತದ ಹಲವು ಪ್ರದೇಶಗಳು, ದೆಹಲಿ, ಹರಿಯಾಣ, ಚಂಡೀಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗಂಗಾ ಪಶ್ಚಿಮ ಬಂಗಾಳ, ಕರ್ನಾಟಕ ಹಾಗೂ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು-ಮಿಂಚು, ಬಿರುಗಾಳಿ ಸಾಧ್ಯತೆ

ಇದೇ ವೇಳೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಳನಾಡು ಕರ್ನಾಟಕ, ಕೇರಳ, ಮಾಹೆ, ಲಕ್ಷದ್ವೀಪ, ಮಧ್ಯ ಮಹಾರಾಷ್ಟ್ರ, ರಾಯಲಸೀಮಾ ಹಾಗೂ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಇಂದು ಗುಡುಗು-ಮಿಂಚು ಸಹಿತ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು IMD ಮುನ್ಸೂಚನೆ ನೀಡಿದೆ.

ಈ ರೀತಿಯ ಹವಾಮಾನ ಪರಿಸ್ಥಿತಿ ಈಶಾನ್ಯ ಭಾರತ, ಬಿಹಾರ, ಕರಾವಳಿ ಕರ್ನಾಟಕ, ಪೂರ್ವ ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲೂ ಮುಂದುವರಿಯುವ ಸಾಧ್ಯತೆಯಿದೆ.

ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರಾಜ್ಯಗಳು ಹಾಗೂ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Share This Article