ರಾಂಚಿ: 135ನೇ ಇಂಡಿಯನ್ ಆಯಿಲ್ ಡುರಂಡ್ ಕಪ್ ಫುಟ್‌ಬಾಲ್ ಟೂರ್ನಿಯ ಮೊದಲ ಕ್ವಾರ್ಟರ್‌ಫೈನಲ್‌ನಲ್ಲಿ ಸ್ಪೋರ್ಟಿಂಗ್ ಕ್ಲಬ್ ದೆಹಲಿ ಭರ್ಜರಿ ಗೆಲುವು ಸಾಧಿಸಿದೆ. ರಾಂಚಿಯ ಬಿರ್ಸಾ ಮುಂಡಾ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪದಾರ್ಪಣೆ ಮಾಡಿರುವ ಎಫ್‌ಸಿ ರೇಂಗ್‌ದೈ ತಂಡವನ್ನು 5-1 ಗೋಲುಗಳಿಂದ ಮಣಿಸಿ ಸ್ಪೋರ್ಟಿಂಗ್ ಕ್ಲಬ್ ದೆಹಲಿ ಸೆಮಿಫೈನಲ್ ಪ್ರವೇಶಿಸಿದೆ.
ಪಂದ್ಯದ ಮೊದಲಾರ್ಧದಲ್ಲಿ ಎಫ್‌ಸಿ ರೇಂಗ್‌ದೈ ಉತ್ತಮ ಹೋರಾಟ ನೀಡಿತ್ತು. ಆದರೆ ದ್ವಿತೀಯಾರ್ಧದಲ್ಲಿ ಸ್ಪೋರ್ಟಿಂಗ್ ಕ್ಲಬ್ ದೆಹಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಸತತ ಗೋಲುಗಳ ಮೂಲಕ ಪಂದ್ಯವನ್ನು ತನ್ನದಾಗಿಸಿಕೊಂಡಿತು.
ಈ ಗೆಲುವಿನೊಂದಿಗೆ ಡುರಂಡ್ ಕಪ್‌ನಲ್ಲಿ ರೇಂಗ್‌ದೈ ತಂಡದ ಚೊಚ್ಚಲ ಅಭಿಯಾನ ಕ್ವಾರ್ಟರ್‌ಫೈನಲ್ ಹಂತದಲ್ಲೇ ಅಂತ್ಯಗೊಂಡಿದೆ. ಪದಾರ್ಪಣೆ ಟೂರ್ನಿಯಲ್ಲೇ ಕ್ವಾರ್ಟರ್‌ಫೈನಲ್ ತಲುಪಿದ್ದ ರೇಂಗ್‌ದೈ ಗಮನಾರ್ಹ ಪ್ರದರ್ಶನ ನೀಡಿತು.
ಸೆಮಿಫೈನಲ್‌ನಲ್ಲಿ ಸ್ಪೋರ್ಟಿಂಗ್ ಕ್ಲಬ್ ದೆಹಲಿ ಈಸ್ಟ್ ಬೆಂಗಾಲ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಬುಧವಾರ ಕೋಲ್ಕತ್ತಾದ ವಿವೇಕಾನಂದ ಯುವಭಾರತಿ ಕ್ರೀರಂಗಣದಲ್ಲಿ ನಡೆಯಲಿದೆ.


