ಮಾಜಿ ಪಂಜಾಬ್ ಸಚಿವ, ಬಿಜೆಪಿ ಹಿರಿಯ ನಾಯಕ ಭಗತ್ ಚುನ್ನಿ ಲಾಲ್ ನಿಧನ

1 Min Read
1 Min Read

ಜಲಂಧರ್: ಪಂಜಾಬ್‌ನ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಭಗತ್ ಚುನ್ನಿ ಲಾಲ್ ಅವರು ದೀರ್ಘಕಾಲದ ಅನಾರೋಗ್ಯದ ಬಳಿಕ ಇಂದು ಜಲಂಧರ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಭಗತ್ ಚುನ್ನಿ ಲಾಲ್ ಅವರ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ ಎಂದು ತಿಳಿಸಲಾಗಿದೆ.

2012ರಲ್ಲಿ ಅಂದಿನ ಶಿರೋಮಣಿ ಅಕಾಲಿ ದಳ (SAD)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಭಗತ್ ಚುನ್ನಿ ಲಾಲ್ ಅವರು ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜಲಂಧರ್ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಪಂಜಾಬ್ ವಿಧಾನಸಭೆಯ ಉಪಸಭಾಪತಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ದೀರ್ಘಕಾಲದ ಸಾರ್ವಜನಿಕ ಜೀವನದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರು, ಪಂಜಾಬ್ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

ಭಗತ್ ಚುನ್ನಿ ಲಾಲ್ ಅವರ ಪುತ್ರ ಮೊಹಿಂದರ್ ಭಗತ್ ಅವರು ಪ್ರಸ್ತುತ ಪಂಜಾಬ್‌ನ ಆಮ್ ಆದ್ಮಿ ಪಕ್ಷ (AAP) ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Share This Article