ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

1 Min Read
1 Min Read

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಹಾಗೂ ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಅಕ್ಟೊಬರ್ 18ರಿಂದ ಉತ್ತರ ಒಳನಾಡು ಬಹುತೇಕ ಭಾಗಗಳಲ್ಲಿ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

 
19.10.25ರ ಸ್ಥಿತಿ?

 

Share This Article
Leave a Comment