ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಇಂದು ಏರಿಕೆ ದಾಖಲಿಸಿವೆ. ವರದಿ ಸಿದ್ಧಪಡಿಸುವ ಸಮಯದಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ. 0.5ರಷ್ಟು ಹೆಚ್ಚಳವಾಗಿ ಪ್ರತಿ ಬ್ಯಾರೆಲ್ಗೆ 106.46 ಅಮೆರಿಕನ್ ಡಾಲರ್ಗೆ ತಲುಪಿತ್ತು.
ಇದೇ ವೇಳೆ, ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲದ ಬೆಲೆ ಶೇ. 0.2ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್ಗೆ 98.18 ಡಾಲರ್ನಲ್ಲಿ ವಹಿವಾಟು ನಡೆಸುತ್ತಿತ್ತು.


