ಸಚಿವ @PriyankKharge ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ

1 Min Read
1 Min Read

❓ಈಗಲಾದರೂ ಅವರು ಮುಖ್ಯಮಂತ್ರಿ @siddaramaiah ಮತ್ತು ಡಿಸಿಎಂ @DKShivakumar ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ್ ಗೆ ಆಗಮಿಸುವ ಜಾಗತಿಕ ಪ್ರತಿನಿಧಿಗಳು ಪ್ರಯಾಣಿಸಬೇಕಾದ ಗುಂಡಿ ಬಿದ್ದ, ಹೊಂಡ ತುಂಬಿದ, ಕಸದಿಂದ ತುಂಬಿ ತುಳುಕುವ ರಸ್ತೆಗಳನ್ನು ಸರಿಪಡಿಸಲು ಮನವಿ ಮಾಡುವರೇ?

 

❓ಬೆಂಗಳೂರು ಟೆಕ್ ಶೃಂಗಸಭೆ (Bengaluru Tech Summit) ನಮ್ಮ ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರವಾಗುವುದಿಲ್ಲ ಎಂದು @INCKarnataka ಸರ್ಕಾರ ಗ್ಯಾರೆಂಟಿ ನೀಡುತ್ತದೆಯೇ?

 

ಕಳೆದ 2.5 ವರ್ಷಗಳಿಂದ, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಮೂಲಸೌಕರ್ಯವನ್ನು ಹಾಳು ಮಾಡಿದೆ, ಟ್ರಾಫಿಕ್ ಸಮಸ್ಯೆ ಉಲ್ಬಣಗೊಳಿಸಿದೆ, ಹೂಡಿಕೆದಾರರನ್ನು ಮತ್ತು ಸ್ಟಾರ್ಟ್‌ಅಪ್‌ಗಳನ್ನು ಹೆದರಿಸಿ, ಬೆದರಿಸಿ, ಅವಮಾನ ಮಾಡಿ ಬೆಂಗಳೂರಿನ ವರ್ಚಸ್ಸಿಗೆ, ಜಾಗತಿಕ ಬ್ರ್ಯಾಂಡ್‌ಗೆ ಧಕ್ಕೆ ತಂದಿದೆ.

 

ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು, ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಭಾಗಿಯಾಗಲು ಪ್ರಪಂಚದ ತಂತ್ರಜ್ಞಾನ ಲೋಕದ ದಿಗ್ಗಜರು ಬೆಂಗಳೂರಿಗೆ ಬರುವ ಮುನ್ನ  ಇಲ್ಲಿನ ರಸ್ತೆಗಳನ್ನು ಸರಿಪಡಿಸಿ, ನಮ್ಮ ನಗರವನ್ನು ಮತ್ತೊಂದು ಸುತ್ತಿನ ಅವಮಾನದಿಂದ ಉಳಿಸಲಿ ಎನ್ನುವುದೇ ಜನರ ನಿರೀಕ್ಷೆ.

 

Share This Article
Leave a Comment