ದೆಹ್ರಾಡೂನ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಎರಡು ದಿನಗಳ ಉತ್ತರಾಖಂಡ ಪ್ರವಾಸ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ದೆಹ್ರಾಡೂನ್ನಲ್ಲಿರುವ ರಾಷ್ಟ್ರಪತಿ ನಿಕೇತನಕ್ಕೆ ಭೇಟಿ ನೀಡಲಿದ್ದಾರೆ.
ಪ್ರವಾಸದ ಮೊದಲ ದಿನವಾದ ಇಂದು, ರಾಷ್ಟ್ರಪತಿ ಮುರ್ಮು ಅವರು 132 ಎಕರೆ ಪ್ರದೇಶದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ರಾಷ್ಟ್ರಪತಿ ಉದ್ಯಾನ (ರಾಷ್ಟ್ರಪತಿ ಉದ್ಯಾನ್) ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ. ಉದ್ಯಾನದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಹಾಗೂ ವಿವಿಧ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
ಪ್ರವಾಸದ ಎರಡನೇ ದಿನವಾದ ನಾಳೆ, ದೆಹ್ರಾಡೂನ್ನ ಭಾರತೀಯ ಸೇನಾ ಅಕಾಡೆಮಿ (ಐಎಂಎ)ಯಲ್ಲಿ ನಡೆಯಲಿರುವ ಪಾಸಿಂಗ್ ಔಟ್ ಪರೇಡ್ನಲ್ಲಿ ರಾಷ್ಟ್ರಪತಿ ಮುರ್ಮು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ದೇಶದ ಪ್ರತಿಷ್ಠಿತ ಸೇನಾ ತರಬೇತಿ ಸಂಸ್ಥೆಯಾಗಿರುವ ಐಎಂಎಯ ಪಾಸಿಂಗ್ ಔಟ್ ಪರೇಡ್ನಲ್ಲಿ ತರಬೇತಿ ಪೂರ್ಣಗೊಳಿಸಿದ ಕೆಡೆಟ್ಗಳು ಅಧಿಕೃತವಾಗಿ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದ್ದು, ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿಯವರ ಉಪಸ್ಥಿತಿ ವಿಶೇಷ ಮಹತ್ವ ಪಡೆದುಕೊಂಡಿದೆ.


