ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ನಾಳೆ ಚಾಲನೆ: 12 ತಂಡಗಳ ನಡುವೆ ಪ್ರಶಸ್ತಿಗಾಗಿ ಮಹಾಸಮರ

1 Min Read
1 Min Read

ಬರ್ಮಿಂಗ್‌ಹ್ಯಾಮ್: ಐಸಿಸಿ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್‌ನ 10ನೇ ಆವೃತ್ತಿಗೆ ನಾಳೆಯಿಂದ ಅಧಿಕೃತ ಚಾಲನೆ ದೊರೆಯಲಿದ್ದು, ಆತಿಥೇಯ ಇಂಗ್ಲೆಂಡ್ ತಂಡವು ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ತಿಂಗಳ ಕಾಲ ನಡೆಯಲಿರುವ ಈ ಪ್ರತಿಷ್ಠಿತ ಟೂರ್ನಿಯು ಇಂಗ್ಲೆಂಡ್ ಮತ್ತು ವೇಲ್ಸ್‌ನ ವಿವಿಧ ಕ್ರೀಡಾಂಗಣಗಳಲ್ಲಿ ಆಯೋಜನೆಯಾಗಿದ್ದು, ಜುಲೈ 5ರಂದು ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡವು ಭಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಇದುವರೆಗೆ ಮಹಿಳಾ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲದಿರುವ ಭಾರತ, ಈ ಬಾರಿ ಚೊಚ್ಚಲ ಕಿರೀಟ ಗೆಲ್ಲುವ ದೃಢ ಸಂಕಲ್ಪದೊಂದಿಗೆ ಕಣಕ್ಕಿಳಿಯುತ್ತಿದೆ.

ವಿಶ್ವಕಪ್ ಇತಿಹಾಸದಲ್ಲೇ ಮೊದಲ ಬಾರಿಗೆ 12 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿದ್ದು, ಒಟ್ಟು 33 ಪಂದ್ಯಗಳು ಏಳು ವಿವಿಧ ಕ್ರೀಡಾಂಗಣಗಳಲ್ಲಿ ನಡೆಯಲಿವೆ. ಈ ಮೂಲಕ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಅತಿದೊಡ್ಡ ಆವೃತ್ತಿಯಾಗಿ ಈ ಟೂರ್ನಿ ದಾಖಲೆ ಬರೆಯಲಿದೆ.

ವಿಶ್ವದ ಶ್ರೇಷ್ಠ ಮಹಿಳಾ ಕ್ರಿಕೆಟ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿರುವ ಈ ಟೂರ್ನಿಯು ಅಭಿಮಾನಿಗಳಿಗೆ ರೋಚಕ ಕ್ರಿಕೆಟ್ ರಸದೌತಣ ನೀಡುವ ನಿರೀಕ್ಷೆ ಮೂಡಿಸಿದೆ.

Share This Article