ತಮಿಳಿಗೆ ಮತ್ತೆ ಎಂಟ್ರಿ ಕೊಟ್ಟ ಉಪೇಂದ್ರ; ಕಾರ್ತಿಕ್ ಸುಬ್ಬರಾಜ್ ಸಿನಿಮಾದಲ್ಲಿ ಪ್ರಮುಖ ಪಾತ್ರ

1 Min Read
1 Min Read

ಚೆನ್ನೈ: ರಿಯಲ್ ಸ್ಟಾರ್ ಉಪೇಂದ್ರ ಮತ್ತೊಮ್ಮೆ ತಮಿಳು ಚಿತ್ರರಂಗದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಹಾಗೂ ನಟ ಅಥರ್ವಾ ಅಭಿನಯದ ಹೊಸ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪ್ರಸ್ತುತ ಸಂಗೀತ ಮಾಂತ್ರಿಕ ಇಳಯರಾಜಾ ಸಂಗೀತ ಸಂಯೋಜನೆ ಮತ್ತು ಆಸ್ಕರ್ ಪ್ರಶಸ್ತಿ ವಿಜೇತೆ ಗುನೀತ್ ಮೊಂಗಾ ನಿರ್ಮಾಣದ ಮತ್ತೊಂದು ಚಿತ್ರದ ಕೆಲಸದಲ್ಲಿ ತೊಡಗಿರುವ ಕಾರ್ತಿಕ್ ಸುಬ್ಬರಾಜ್, ಸಮಕಾಲದಲ್ಲಿ ಅಥರ್ವಾ ನಾಯಕನಾಗಿರುವ ಹೊಸ ಪ್ರಾಜೆಕ್ಟ್‌ಗೂ ಚಾಲನೆ ನೀಡಿದ್ದಾರೆ.

ಈ ಚಿತ್ರದಲ್ಲಿ ಉಪೇಂದ್ರ ಪ್ರಮುಖ ಪಾತ್ರ ನಿರ್ವಹಿಸಲಿದ್ದು, ಕಥೆಯ ಬೆಳವಣಿಗೆಯಲ್ಲಿ ಅವರ ಪಾತ್ರಕ್ಕೆ ವಿಶೇಷ ಮಹತ್ವವಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಚಿತ್ರದ ಶೀರ್ಷಿಕೆ ಸೇರಿದಂತೆ ಅಧಿಕೃತ ಮಾಹಿತಿಯನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ.

ಕಾರ್ತಿಕ್ ಸುಬ್ಬರಾಜ್ ಅವರ ಸ್ಟೋನ್ ಬೆಂಚ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿರುವ ಈ ಚಿತ್ರದ ಚಿತ್ರೀಕರಣ ಮುಂದಿನ ತಿಂಗಳಿಂದ ಆರಂಭವಾಗುವ ನಿರೀಕ್ಷೆಯಿದೆ. ಉಪೇಂದ್ರರ ತಮಿಳು ಚಿತ್ರರಂಗದ ಪುನರಾಗಮನದ ಸುದ್ದಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

Share This Article