ಎಸ್‌ಸಿಒ ಮಹಿಳಾ ವೇದಿಕೆಯಲ್ಲಿ ಭಾರತದ ಬದ್ಧತೆ ಪುನರುಚ್ಚಾರ; ಮಹಿಳಾ ನೇತೃತ್ವದ ಅಭಿವೃದ್ಧಿಗೆ ಒತ್ತು

1 Min Read
1 Min Read

ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಮಹಿಳಾ ವೇದಿಕೆ-2026ರಲ್ಲಿ ಭಾರತ ಮಹಿಳಾ ನೇತೃತ್ವದ ಅಭಿವೃದ್ಧಿಗೆ ತನ್ನ ಬದ್ಧತೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ವರ್ಚುವಲ್ ಮೂಲಕ ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣಾ ದೇವಿ, ಮಹಿಳೆಯರು ಅಭಿವೃದ್ಧಿಯ ಫಲಾನುಭವಿಗಳಷ್ಟೇ ಅಲ್ಲ, 2047ರ ‘ವಿಕಸಿತ ಭಾರತ’ ನಿರ್ಮಾಣದ ಅತ್ಯಂತ ಶಕ್ತಿಶಾಲಿ ಚಾಲಕ ಶಕ್ತಿಯಾಗಿದ್ದಾರೆ ಎಂದು ಹೇಳಿದರು.

ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವನ್ನು ಉಲ್ಲೇಖಿಸಿದ ಅವರು, ದೇಶದಲ್ಲಿ ಸುಮಾರು 10 ಕೋಟಿ ಮಹಿಳೆಯರು 90 ಲಕ್ಷಕ್ಕೂ ಅಧಿಕ ಸ್ವಸಹಾಯ ಸಂಘಗಳಲ್ಲಿ ಸಂಘಟಿತರಾಗಿದ್ದು, ಅವರಲ್ಲಿ 3 ಕೋಟಿಗೂ ಹೆಚ್ಚು ಮಹಿಳೆಯರು ‘ಲಖ್‌ಪತಿ ದೀದಿ’ಗಳಾಗಿ ಹೊರಹೊಮ್ಮಿದ್ದಾರೆ ಎಂದು ತಿಳಿಸಿದರು.

ಮಿಷನ್ ಶಕ್ತಿ ಹಾಗೂ ಮಿಷನ್ ಪೋಷಣ್ 2.0 ಸೇರಿದಂತೆ ವಿವಿಧ ಕೇಂದ್ರ ಸರ್ಕಾರದ ಯೋಜನೆಗಳು ಮಹಿಳೆಯರ ಸುರಕ್ಷತೆ, ಆರೋಗ್ಯ, ಆರೈಕೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡುತ್ತಿವೆ ಎಂದು ಅವರು ಹೇಳಿದರು.

ಮಹಿಳೆಯರ ಆರ್ಥಿಕ ನಾಯಕತ್ವ ಮತ್ತು ಸಮಗ್ರ ಕಲ್ಯಾಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಸ್‌ಸಿಒ ಸದಸ್ಯ ರಾಷ್ಟ್ರಗಳೊಂದಿಗೆ ಭಾರತದ ಅನುಭವಗಳನ್ನು ಹಂಚಿಕೊಳ್ಳಲು ಹಾಗೂ ಸಹಕಾರವನ್ನು ಇನ್ನಷ್ಟು ಬಲಪಡಿಸಲು ಭಾರತ ಸಿದ್ಧವಾಗಿದೆ ಎಂದು ಅನ್ನಪೂರ್ಣಾ ದೇವಿ ತಿಳಿಸಿದರು.

Share This Article
Leave a Comment