ನಾಳೆಯಿಂದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಕರ್ನಾಟಕ ಪ್ರವಾಸ

0 Min Read
0 Min Read

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ನಾಳೆಯಿಂದ ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರವಾಸದ ಮೊದಲ ದಿನ ಬೆಂಗಳೂರಿನಲ್ಲಿ ನಡೆಯಲಿರುವ ನಾಡಪ್ರಭು ಶ್ರೀ ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ಜೂನ್ 29ರಂದು ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ಸಂಸ್ಥಾಪನಾ ದಿನಾಚರಣೆ ಹಾಗೂ ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿರುವ ‘ನಶಾ ಮುಕ್ತ ಭಾರತ’ ಸಮಾವೇಶದಲ್ಲಿ ಉಪರಾಷ್ಟ್ರಪತಿ ಭಾಗವಹಿಸಿ ಮಾತನಾಡಲಿದ್ದಾರೆ.

Share This Article
Leave a Comment